ರಾಜಸ್ಥಾನ: ಕೋರ್ಟ್ ಆವರಣದಲ್ಲಿ ವಕೀಲರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಕಾರ್ ಜಿಲ್ಲೆಯ ಖಾಂಡೇಲಾದ ಎಸ್‌ಡಿಎಂ ನ್ಯಾಯಾಲಯದ ಮುಂದೆ ನಡೆದಿದೆ.
ವಕೀಲ ಹಂಸರಾಜ್ ಮಾಳವೀಯ ಎಂಬಾತ ಮಾನಸಿಕ ಒತ್ತಡದಿಂದ ಎಸ್‌ಡಿಎಂ ನ್ಯಾಯಾಲಯದ ಮುಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಬೆಂಕಿಯಿಂದ ತಪ್ಪಿಸಲು ಹೋಗಿದ್ದ ಉಪವಿಭಾಗಾಧಿಕಾರಿ ರಾಕೇಶ್ ಕುಮಾರ್ ಅವರ ಕೈಗಳಿಗೂ ಸುಟ್ಟ ಗಾಯಗಳಾಗಿವೆ. ಕೂಡಲೇ ವಕೀಲರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜೈಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.
ವಕೀಲ ಹಂಸರಾಜ್ ಮಾಳವೀಯ ಸಾವಿನ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಕೀಲರು ಧರಣಿ ನಡೆಸಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post