ರಾಜಸ್ಥಾನ: ಪೇಪರ್ ಪ್ಲೇಟ್ ತಯಾರಿ ಮಾಡೋ ಗೋದಾಮಿನಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆ ದೌಸಾ ಜಿಲ್ಲೆಯ ಮಹುವಾ ಪ್ರದೇಶದ ಮೋಜ್‌ಪುರ ಗ್ರಾಮದಲ್ಲಿ ನಡೆದಿದೆ. ಇದರ ಪರಿಣಾಮ ಗೋದಾಮಿನಲ್ಲೇ ಆರು ಮಂದಿ ಸಿಕ್ಕಿ ಹಾಕಿಕೊಂಡಿರೋ ಮಾಹಿತಿ ಲಭ್ಯವಾಗಿದೆ.
ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಕೆಮಿಕಲ್ನಿಂದ ಟ್ಯಾಂಕರ್ಗೆ ಬೆಂಕಿ ಹೊತ್ತಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ, ಇದುವರೆಗೂ ಬೆಂಕಿ ನಂದಿಸಲು ಆಗಲಿಲ್ಲ.
ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ. ಸಾವು ನೋವಿನ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬರಬೇಕಿದೆ ಎಂದು ಮಹುವಾ ಪೊಲೀಸ್ ಅಧಿಕಾರಿ ಪ್ರಕಾಶ್ ತಿಳಿಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post