5G ನೆಟ್ವರ್ಕ್ ಹರಾಜಿಗೆ ಇಂದು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಇದರೊಂದಿಗೆ ಶೀಘ್ರದಲ್ಲೇ ದೇಶದಲ್ಲಿ 5G ನೆಟ್ವರ್ಕ್ ಸೇವೆಗಳು ಶುರುವಾಗುವ ಮುನ್ಸೂಚನೆ ಸಿಕ್ಕಿದೆ. ಇದು 4G ಗಿಂತ ಸುಮಾರು 10 ಪಟ್ಟು ವೇಗವಾಗಿರಲಿದೆ.
ಟೆಲಿಕಾಂ ಸೇವಾ ಪೂರೈಕೆದಾರರಿಗೆ ವ್ಯಾಪಾರ ವೆಚ್ಚವನ್ನು ಕಡಿಮೆ ಮಾಡಲು 5G ನೆಟ್ವರ್ಕ್ ಸಹಾಯ ಮಾಡುತ್ತದೆ ಎಂದು ಹೇಳಲಾಗಿದೆ. 72 GHz ಗಿಂತ ಹೆಚ್ಚಿನ 5G ಸೇವೆಯನ್ನ 20 ವರ್ಷಗಳ ಅವಧಿಗೆ ಹರಾಜು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ದೂರಸಂಪರ್ಕ ಇಲಾಖೆಯು 5G ಸ್ಪೆಕ್ಟ್ರಮ್ ಹರಾಜು ಪ್ರಸ್ತಾಪಿಸಿತ್ತು. ಇದಕ್ಕೆ ಸಂಪುಟ ಅನುಮೋದನೆ ನೀಡಿದೆ. ಕೇಂದ್ರ ಸಂಪುಟದ ನಿರ್ಧಾರದಂತೆ ಹರಾಜು ಪ್ರಕ್ರಿಯೆ ಜುಲೈನಲ್ಲಿ ಶುರುವಾಗಲಿದೆ. ಒಟ್ಟು 72097.85 MHz ಸ್ಪೆಕ್ಟ್ರಮ್ ಅನ್ನು ಕೇಂದ್ರ ಸರ್ಕಾರ ಹರಾಜು ಮಾಡಲಿದೆ. ಜುಲೈ ಅಂತ್ಯದ ವೇಳೆಗೆ 5G ಸ್ಪೆಕ್ಟ್ರಂ ಹರಾಜು ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಯಾವ ಕಂಪನಿ ಪಾಲಾಗುತ್ತೆ..?
ಮೂರು ಪ್ರಮುಖ ಕಂಪನಿಗಳಾದ ವೊಡಾಫೋನ್ ಐಡಿಯಾ, ಭಾರ್ತಿ ಏರ್‌ಟೆಲ್ ಲಿಮಿಟೆಡ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಹರಾಜಿನಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಯಶಸ್ವಿ ಬಿಡ್‌ದಾರರು 5G ಸ್ಪೆಕ್ಟ್ರಮ್ ಅನ್ನು 20 ವರ್ಷಕ್ಕೆ ಇಎಂಐ ಮೂಲಕ ಖರೀದಿಸಲಿದ್ದಾರೆ. 5G ಸೇವೆಯು ಸಂಪೂರ್ಣ ಇಕೋ ಸಿಸ್ಟಮ್ (eco-system) ಆಗಿರಲಿದೆ ಎನ್ನಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post