ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ವೈಯನಾಡು ಸಂಸದ ರಾಹುಲ್ ಗಾಂಧಿಗೆ ಇಂದು ಮೂರನೇ ದಿನವೂ ಜಾರಿ ನಿರ್ದೇಶನಾಲಯ ವಿಚಾರಣೆ ಮುಂದುವರೆಸಿದೆ. ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಪತ್ರಿಕೆಗೆ ಸಂಬಂಧಿಸಿದ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆಯಂಥ ಗಂಭೀರ ಆರೋಪ ಸದ್ಯ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಮೇಲಿದೆ. ಈ ಹಿನ್ನೆಲೆಯಲ್ಲಿ ED ಸತತ ವಿಚಾರಣೆಯನ್ನು ನಡೆಸುತ್ತಿದೆ.
ಇನ್ನೊಂದೆಡೆ ರಾಹುಲ್ ಗಾಂಧಿ ವಿಚಾರಣೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ಇಂದೂ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಗೆ ಅನುಮತಿ ಇಲ್ಲದಿದ್ರೂ ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್ ಉರುಳಿಸುವುದು, ಪೊಲೀಸರ ಮೇಲೆ ಮುನ್ನುಗ್ಗುವುದು ಹಾಗೂ ಘೋಷಣೆ ಕೂಗುವುದನ್ನು ಮುಂದುವರೆಸಿದ್ದಾರೆ. ಈ ನಡುವೆ ಉಗ್ರ ಪ್ರತಿಭಟನೆಯಲ್ಲಿ ತೊಡಗಿದ್ದ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ರನ್ನು ಪೊಲೀಸರು ವಶಕ್ಕೆ ಪಡೆಯುವಾಗ ಹೈ ಡ್ರಾಮಾವೇ ನಡೆದಿದೆ.
ಇಂದೂ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಬಿ.ವಿ ಶ್ರೀನಿವಾಸ್ರನ್ನು ಪೊಲೀಸರು ವಶಕ್ಕೆ ಪಡೆಯುವಾಗ ತಪ್ಪಿಸಿಕೊಳ್ಳಲು ಅವರು ಯತ್ನಿಸಿಸುತ್ತಿದ್ದರು. ಈ ನಡುವೆ ನಾಲ್ವರು ಪೊಲೀಸರು ಇಬ್ಬರು ಕೈ ಹಾಗೂ ಇಬ್ಬರು ಕಾಲು ಹಿಡಿದು ಎತ್ತಿಕೊಂಡು ಹೋಗುತ್ತಿದ್ದಾಗ, ಪೊಲೀಸ್ ಒಬ್ಬರು ಅವರ ಬುಡಕ್ಕೆ ಒದ್ದ ದೃಶ್ಯ ಕೂಡ ಸೆರೆಯಾಗಿದೆ.
I think B in Srinivas BV should stand for “Bhagauda” .. always running away like his leader Run Away Gandhi 😂🤣 pic.twitter.com/1KQzrBAEXH
— Yo Yo Funny Singh 🇮🇳 (@moronhumor) June 14, 2022
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post