ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದೆ. ಇಂದು ದೇಶದಲ್ಲಿ 12,213 ಕೊರೊನಾ ಕೇಸ್‌ಗಳು ಪತ್ತೆಯಾಗಿವೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿಗೆ 11 ಮಂದಿ ಸಾವನ್ನಪ್ಪಿದ್ದಾರೆ.
ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 58.215ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ 4,024 ಮತ್ತು ಕೇರಳದಲ್ಲಿ 3,488 ಅತಿ ಹೆಚ್ಚು ಕೇಸ್‌ಗಳು ದಾಖಲಾಗಿವೆ. ದೇಶದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.2.35ರಷ್ಟಿದೆ.
ನಿನ್ನೆ 8,822 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇಂದು ಕೇಸ್‌ಗಳಲ್ಲಿ 40 ರಷ್ಟು ಹೆಚ್ಚಳವಾಗಿದೆ. ಈಗಾಗಲೇ ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದ್ದು ಕೊರೊನಾ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post