ಟೀಮ್ ಇಂಡಿಯಾ ಇಂದು ಆಂಗ್ಲರನಾಡು ಇಂಗ್ಲೆಂಡ್ಗೆ ಪ್ರವಾಸ ಕೈಗೊಳ್ಳಲಿದೆ. ಮುಂಬೈನಿಂದ ಟೀಮ್ ಇಂಡಿಯಾ ಆಟಗಾರರು ಲಂಡನ್ಗೆ ಪ್ರಯಾಣ ಬೆಳೆಸಲಿದ್ದಾರೆ.
ಈಗಾಗಲೇ ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರಿತ್ ಬುಮ್ರಾ ಮುಂಬೈನಲ್ಲಿ ಬೀಡು ಬಿಟ್ಟಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಗೆ ಈ ಮೂವರಿಗೆ ರೆಸ್ಟ್ ನೀಡಲಾಗಿತ್ತು. ಜುಲೈ 1 ರಿಂದ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಬಾಕಿ ಉಳಿದಿರೋ ಏಕೈಕ ಟೆಸ್ಟ್ ಆಡಲಿದೆ.
ಕಳೆದ ವರ್ಷ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಂಡಿತ್ತು. ಈ ವೇಳೆ ಕೋವಿಡ್ ಕಾರಣದಿಂದ ಟೆಸ್ಟ್ ಸರಣಿಯ 5ನೇ ಪಂದ್ಯ ಮುಂದೂಡಲಾಗಿತ್ತು. ಈ ಟೆಸ್ಟ್ ನಂತರ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಏಕದಿನ ಹಾಗೂ ಟಿ-20 ಸರಣಿ ಆಡಲಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post