ಬೆಂಗಳೂರು: ರಾಜ್ಯಾದ್ಯಂತ 80 ಕಡೆ ಎಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. 21 ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧಕಾರ್ಯ ಮುಂದುವರಿಸಿದ್ದಾರೆ.
ಬೆಳಗ್ಗೆ ಐದು ಗಂಟೆ ಸುಮಾರಿಗೆ 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಜೆಪಿ ನಗರದ ಶಿವಲಿಂಗಯ್ಯ ಎಂಬುವವರ ಮನೆ ಹಾಗೂ ಕಚೇರಿಗಳ ಮೇಲೂ ದಾಳಿಯಾಗಿದೆ.
ಬಿಡಿಎ ಅಧಿಕಾರಿ ಆಗಿರುವ ಶಿವಲಿಂಗಯ್ಯ ಜೆಪಿನಗರ, ದೊಡ್ಡಕಲ್ಲಸಂದ್ರ, ಹಾಗೂ ಬಸವನಗುಡಿಗಳಲ್ಲಿ ಮನೆಯನ್ನ ಹೊಂದಿದ್ದಾರೆ. ಅಕ್ರಮ ಆಸ್ತಿಗಳಿಕೆ ಬಗ್ಗೆ ದೂರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ದಾಳಿಯಾಗಿದೆ.
ಹಾಸನದಲ್ಲೂ ದಾಳಿ
ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಎಇಇ ರಾಮಕೃಷ್ಣ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎಸಿಬಿ ಡಿವೈಎಸ್‌ಪಿ ಸತೀಶ್ ನೇತೃತ್ವದಲ್ಲಿ ರಾಮಕೃಷ್ಣಗೆ ಸೇರಿದ ಮನೆ, ಆಫೀಸ್ ಸೇರಿ ಮೂರು ಕಡೆ ದಾಳಿಯಾಗಿದೆ. ಹಾಸನದ ವಿದ್ಯಾನಗರದಲ್ಲಿರುವ ನಿವಾಸ, ಹಿರಿಸಾವೆ ನಿವಾಸ ಹಾಗೂ ಕುವೆಂಪುನಗರದಲ್ಲಿರುವ ಕಚೇರಿ ಮೇಲೆ ದಾಳಿಯಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post