ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜೂನ್ 12 ರಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿಯ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ನಾಯಕಿಗೆ ಚಿಕಿತ್ಸೆ ಮುಂದುವರಿದಿದೆ. ಇದೀಗ ಅವರಲ್ಲಿ ಪೋಸ್ಟ್ ಕೋವಿಡ್ ಸಿಂಪ್ಟಮ್ಸ್ ಕಾಣಿಸಿಕೊಂಡಿದೆ ಎಂದು ಕಾಂಗ್ರೆಸ್ ಮಾಹಿತಿ ನೀಡಿದೆ.
ಪೋಸ್ಟ್ ಕೋವಿಡ್ ಲಕ್ಷಗಳ ಜೊತೆಗೆ ಈ ವಾರದ ತಪಾಷಣೆ ವೇಳೆ ರೆಸ್ಪಿರೇಟರಿ ಸಿಸ್ಟಮ್ನಲ್ಲಿ ಫಂಗಲ್ ಇನ್ಫೆಕ್ಷನ್ ಪತ್ತೆಯಾಗಿತ್ತು. ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯ ಅವರಿಗೆ ಪೋಸ್ಟ್ ಕೋವಿಡ್ಗೆ ಸಂಬಂಧಿಸಿದ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಸೋನಿಯಾ ಗಾಂಧಿ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ ಎಂದು ಕಾಂಗ್ರೆಸ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಜೊತೆಗೆ ಇ.ಡಿ ಕಚೇರಿಗೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಸಮನ್ಸ್ ಬಂದಿತ್ತು. ಆದರೆ ಕೋವಿಡ್ ಪಾಸಿಟಿವ್ ಆಗಿರುವುದರಿಂದ ಇ.ಡಿ ಮುಂದೆ ಹಾಜರಾಗಲು ಸಾಧ್ಯವಾಗಲಿಲ್ಲ.
Health update on Congress President Smt. Sonia Gandhi. pic.twitter.com/pCWsLkWf05
— Congress (@INCIndia) June 17, 2022
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post