ಬೆಂಗಳೂರು: ಬಸವರಾಜ ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳ ಎದುರು ಬೊಮ್ಮಾಯಿ ವಿರುದ್ಧ ಕಿಡಿಕಾರಿರುವ ಕುಮಾರಸ್ವಾಮಿ, ಕೀ ಇರೋದೆ ಬೇರೆ ಕಡೆ. ಪಾಪ ಅವರೇನು ಮಾಡ್ತಾರೆ? ಅವರ ಬಗ್ಗೆ ನನಗೆ ಕನಿಕರ ಇದೆ. ಸ್ವತಂತ್ರವಾಗಿ ಸಿಎಂ ಅಧಿಕಾರ ನಡೆಸಲು ಆಗುತ್ತಿಲ್ಲ ಎಂದು ಟೀಕಿಸಿದ್ದಾರೆ.
ಅವರಿಂದ ಸ್ವಾತಂತ್ರ್ಯವಾಗಿ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲವೂ ಕೂಡ ಕೇಶವಕೃಪಾದಿಂದ ಬರಬೇಕು. ಅಲ್ಲಿಂದ ಬರೋದೇ ಅಂತಿಮ ನಿರ್ಧಾರ. ಇವತ್ತು ಹಂತ ಹಂತವಾಗಿ ದೇಶದಲ್ಲಿ ಮನು ಸಂಸ್ಕೃತಿ ವಾತಾವರಣ ನಿರ್ಮಿಸಲು ಹೊರಟಿದ್ದಾರೆ. ಈ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು. ವಿರೋಧ ಪಕ್ಷಗಳು ಮೊದಲು ಈ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post