ಬೆಳಗಾವಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತಾಯಿ-ಇಬ್ಬರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ನೀಡಿದೆ. ಜೂನ್ 21 ರಂದು ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಜೀವಾವಧಿ ಶಿಕ್ಷೆಯ ಆದೇಶವನ್ನ ತಿರಸ್ಕರಿಸಿ ಹೈಕೋರ್ಟ್ ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ.
ಏನಿದು ಪ್ರಕರಣ..?
ಬೆಳಗಾವಿಯ ಕುವೆಂಪು ನಗರದಲ್ಲಿ 2015 ಆಗಸ್ಟ್ 16 ರಂದು ನಸುಕಿನ ಜಾವ ತ್ರಿವಳಿ ಕೊಲೆ ನಡೆದಿತ್ತು. ಈ ಕೃತ್ಯದಲ್ಲಿ ರೀನಾ ಮಾಲಗತ್ತಿ, ಆದಿತ್ಯ ಮಾಲಗತ್ತಿ, ಸಾಹಿತ್ಯ ಮಾಲಗತ್ತಿ ಸಾವನ್ನಪ್ಪಿದ್ದರು. ಕೊಲೆ ನಡೆದ 24 ಗಂಟೆಯಲ್ಲಿ ಕೊಲೆ ಆರೋಪಿ ಪ್ರವೀಣ್ ಭಟ್ನನ್ನ ಬಂಧಿಸಿದ್ದರು. ತ್ರಿವಳಿ ಕೊಲೆಗೆ ರೀನಾ ಹಾಗೂ ಪ್ರವೀಣ್ ಭಟ್ ನಡುವಿನ ಅನೈತಿಕ ಸಂಬಂಧ ಕಾರಣ ಎನ್ನಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದಷ್ಟು ವಿಚಾರಣೆ ನಡೆಸಿದ್ದ, ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಆರೋಪಿ ಪ್ರವೀಣ್ ಭಟ್ ತಪ್ಪಿತಸ್ಥ ಎಂದು ಹೇಳಿತ್ತು. ಅಲ್ಲದೇ ಜೀವಾವಧಿ ಶಿಕ್ಷೆಯನ್ನೂ ಕೂಡ ನೀಡಿತ್ತು. ಎಪ್ರಿಲ್ 16, 2018 ರಂದು ರಂದು ಜೀವಾವಧಿ ಶಿಕ್ಷೆಯನ್ನ ಪ್ರಕಟಿಸಲಾಗಿತ್ತು. ಈ ತೀರ್ಪಿನ ವಿರುದ್ಧ ಪ್ರವೀಣ್ ಭಟ್, ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ.ಎಸ್.ಮುದಗಲ್, ಎಂಜಿಎಸ್ ಕಮಲ್ ಅವರಿಂದ ಪ್ರವೀಣ್ ಭಟ್ ನಿರ್ದೋಷಿ ಎಂದು ತೀರ್ಪು ನೀಡಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post