ಅಸ್ಸಾಂ: ಸತತವಾಗಿ ಸುರಿಯುತ್ತಿರುವ ರಣಭೀಕರ ಮಳೆಗೆ ಅಸ್ಸಾಂ ಜನ ತತ್ತರಿಸಿ ಹೊಗಿದ್ದಾರೆ. ಪ್ರವಾಹದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸದ್ಯ ಅಲ್ಲಿನ ಜನರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದು, ದಿನನಿತ್ಯದ ಜೀವನ ಅಸ್ತವ್ಯಸ್ತಗೊಂಡಿದೆ.
ಚಿರಾಂಗ್ ಜಿಲ್ಲೆಯಲ್ಲಿ ಪ್ರವಾಹದ ಪರಿಸ್ಥಿತಿ ಹದಗೆಟ್ಟಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಪ್ರವಾಹಕ್ಕೆ ಕಳೆದ 24 ಗಂಟೆಗಳಲ್ಲಿ ನಾಲ್ವರು ಮಕ್ಕಳು ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದಾರೆ.
ಪ್ರವಾಹದಿಂದ ಹತ್ತಾರು ಸಾವಿರ ಜನ ಸಂತ್ರಸ್ಥರಾಗಿದ್ದಾರೆ. ರಾಜ್ಯದಲ್ಲಿ 845 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಈ ಪರಿಹಾರ ಶಿಬಿರಗಳಲ್ಲಿ ಸಾವಿರಾರು ಮಂದಿ ಆಶ್ರಯ ಪಡೆದಿದ್ದಾರೆ.
ಬಜಾಲಿ, ಬಕ್ಸಾ, ಬರ್ಪೇಟಾ, ಬಿಸ್ವನಾಥ್, ಕ್ಯಾಚಾರ್, ಚಿರಾಂಗ್ ಸೇರಿದಂತೆ ಅನೇಕ ಜಿಲ್ಲೆಗಳು ಪ್ರವಾಹದ ಹೊಡೆತಕ್ಕೆ ಸಿಲುಕಿವೆ. ಈ ಪ್ರದೇಶಗಳಿಗೆ ಸಿಎಂ ಹಿಮಾಂತ ಬಿಸ್ವಾ ಶರ್ಮಾ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಿದರು.
Massive rescue evacuation and relief operations are continuing round the clock in the worst affected areas of Silchar Town like Rangirkhari, Public School Road, Ashram Road etc areas by the officials of District Administration, NDRF, SDRF, Army, CRPF, BSF and pic.twitter.com/cDf7Tl75Gd
— Deputy Commissioner Cachar (@dccachar) June 21, 2022
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post