ಶಿವಮೊಗ್ಗ: ಮಲೆನಾಡಿನಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಜಿಲ್ಲೆಯ ಜಲರಧಾರೆಗಳು ಮೈತುಂಬಿಕೊಳ್ಳುತ್ತಿವೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ವಿಶ್ವ ವಿಖ್ಯಾತ ಜೋಗ ಜಲಪಾತವನ್ನು ವೀಕ್ಷಿಸಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.
ಕಳೆದ ನಾಲ್ಕೈದು ದಿನಗಳಿಂದ ಬಿಟ್ಟೂ ಬೀಡದೇ ಮಳೆ ಸುರಿಯುತ್ತಿರುವುದರಿಂದ ಜೋಗ ಜಲಪಾತದಲ್ಲಿ ಹೊಸ ಕಳೆ ಮೂಡಿದೆ. ಮೇಲಿನಿಂದ ಕೆಳಗೆ ಧುಮ್ಮಿಕ್ಕಿ ಬೀಳುತ್ತಿರುವ ಹಾಲ್ನೊರೆಯಂತಹ ನೀರಿನ ಸೊಬಗು ನೋಡಲು ರಮಣೀಯವಾಗಿದೆ.
ಜೋಗದ ರಾಜಾ, ರಾಣಿ, ರೋರರ್, ರಾಕೆಟ್ ಕವಲುಗಳಿಗೆ ಮತ್ತೆ ಜೀವ ಕಳೆ ಬಂದಿದೆ. ಇದೀಗ ಪ್ರವಾಸಿಗರಿಗೆ ಜಲಪಾತವನ್ನು ಕಣ್ತುಂಬಿಕೊಳ್ಳುವುದೇ ಒಂದು ಹಬ್ಬವಾಗಿದೆ.
ಮೈದುಂಬಿದ ಜೋಗ ಜಲಪಾತ.. ಹೊಸ ಕಳೆಗೆ ಮನಸೋತ ಪ್ರವಾಸಿಗರು..! https://t.co/bi3HP07hNY pic.twitter.com/NjNFpr1enJ
— NewsFirst Kannada (@NewsFirstKan) June 23, 2022
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post