ಬೆಂಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

ಇದನ್ನು ಓದಿ: ಗಂಡನನ್ನು ಜೈಲಿನಿಂದ ಹೊರ ತರಲು ಡ್ರಗ್ಸ್ ಮಾರುತ್ತಿದ್ದ ಮಹಿಳೆ ಅರೆಸ್ಟ್..!
ನಗರದ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಅಭಿ ಮತ್ತು ಅಭಿಷೇಕ್ ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ಹೆಡೆ ಮುರಿಕಟ್ಟಿದ್ದಾರೆ. ಇನ್ನು ಆರೋಪಿಗಳಿಂದ 7 ಕೆಜಿ 550 ಗ್ರಾಂ ಗಾಂಜಾ ಹಾಗೂ ನಗದು ಹಣವನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಕುರಿತು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post