ವಿಕ್ರಾಂತ್ ರೋಣ ಸಿನಿಮಾದ ಪ್ರಚಾರಕ್ಕಾಗಿ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮುಂಬೈಗೆ ತೆರಳಿದ್ದಾರೆ. ಮುಂಬೈನಲ್ಲಿ ವಿಶೇಷ ರೀತಿಯಲ್ಲಿ ಪ್ರಚಾರಕ್ಕೆ ಚಾಲನೆ ನೀಡಲಾಗಿದ್ದು, ರಾ ರಾ ರಕ್ಕಮ್ಮ ಹಾಡಿಗೆ ನೃತ್ಯ ಕಲಾವಿದರ ಜೊತೆ ಸುದೀಪ್ ಮತ್ತು ಜಾಕ್ವೆಲಿನ್ ಹೆಜ್ಜೆ ಹಾಕಿದ್ದಾರೆ.
ಈ ಜೋಡಿ ವಿಶೇಷ ಕಾಸ್ಟ್ಯೂಮ್ನಲ್ಲೂ ಮಿರ ಮಿರ ಮಿಂಚುತ್ತಿದ್ದರು. ಬಾಲಿವುಡ್ನ ತಾರೆಯರು ಕಿಚ್ಚನಿಗೆ ಸಾಥ್ ನೀಡಿದ್ರು. ಇನ್ನು ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲಿ ಟ್ರೈಲರ್ ರಿಲೀಸ್ ಆಗುತ್ತಿದ್ದು, ಹಿಂದಿಯಲ್ಲಿ ಸಲ್ಮಾನ್ ಖಾನ್, ತಮಿಳಿನಲ್ಲಿ ಧನುಷ್, ತೆಲುಗಿನಲ್ಲಿ ರಾಮ್ ಚರಣ್ ತೇಜ್, ಮಲಯಾಳಂನಲ್ಲಿ ದುಲ್ಕರ್ ಸಲ್ಮಾನ್ ಬಿಡುಗಡೆ ಮಾಡುತ್ತಿದ್ದಾರೆ.
#KicchaSudeep on going ⚡️BIG⚡️with#VikrantRona & #VikrantRonaTrailer event.#JacquelineFernandez pic.twitter.com/zUumblPJ26
— Pinkvilla South (@PinkvillaSouth) June 23, 2022
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post