ಡೆಹರಾಡೂನ್: ಉತ್ತರಾಖಂಡದ ಕನ್ವಾರ್ ಯಾತ್ರೆಗೆ ಈಗಾಗಲೇ ಭಾರೀ ಸಿದ್ಧತೆಯನ್ನು ಕೈಗೊಳ್ಳಲಾಗ್ತಿದೆ. ಕೋವಿಡ್–19 ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಯಾತ್ರೆಯನ್ನು ಜುಲೈ 14ರಿಂದ 26ರವರೆಗೆ ನಡೆಸಲು ನಿರ್ಧರಿಸಲಾಗಿದೆ.
ಕನ್ವಾರ್ ಯಾತ್ರೆ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಿಸಿಟಿವಿ ಕ್ಯಾಮೆರಾ, ಡ್ರೋನ್, ಜೊತೆಗೆ 10,000 ಮಂದಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಉತ್ತರ ಪ್ರದೇಶ, ಹರಿಯಾಣ, ದೆಹಲಿ, ಹಿಮಾಚಲ ಪ್ರದೇಶ, ಪಂಜಾಬ್, ರಾಜಸ್ಥಾನ ಮತ್ತು ಇತರ ಸ್ಥಳಗಳಿಂದ ಬರುವ ಭಕ್ತರಿಗೆ ಸುರಕ್ಷತೆ ನೀಡುವುದೇ ನಮ್ಮ ಉದ್ದೇಶವಾಗಿದೆ ಎಂದು ಉತ್ತರಾಖಂಡದ ಪೊಲೀಸ್ ಮಹಾನಿರ್ದೆಶಕ ಅಶೋಕ್ ಕುಮಾರ್ ಹೇಳಿದರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post