ಮುಂಬೈ: ನಾಳೆಯೇ ಬಹುಮತ ಸಾಬೀತು ಪಡಿಸುವಂತೆ ಮಹಾರಾಷ್ಟ್ರ ರಾಜ್ಯಪಾಲರು ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ನಾಳೆಯೇ ಬಹುಮತ ಸಾಬೀತು ಪಡಿಸಿ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ನಾಳೆ ಬೆಳ್ಳಿಗೆ 11 ಗಂಟೆಗೆ ಬಹುಮತ ಸಾಬೀತು ಮಾಡುವಂತೆ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಈ ಆದೇಶ ನೀಡಿದ್ದು, ನಾಳೆ ಸಿಎಂ ಉದ್ಧವ್ ಠಾಕ್ರೆ ಅಘಾಡಿ ಸರ್ಕಾರಕ್ಕೆ ಅಗ್ನಿಪರೀಕ್ಷೆ ಎದುರಾಗಿದೆ.
3 ಪ್ರಮುಖ ಬೇಡಿಕೆಗಳೊಂದಿಗೆ ಏಕನಾಥ್ ಶಿಂಧೆ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿದ ಸುಪ್ರೀಂಕೋರ್ಟ್ ಈಗ ತುರ್ತು ವಿಚಾರಣೆ ಮಾಡಿದೆ. ಅಲ್ಲದೇ ತನ್ನ ಮಹತ್ವದ ತೀರ್ಪನ್ನು ಕೊಟ್ಟಿದೆ.
ಉದ್ಧವ್ ಠಾಕ್ರೆ ಬಂಡಾಯ ಶಾಸಕರ ಕಾರಣದಿಂದಲೇ 3ನೇ ಎರಡರಷ್ಟು ಬೆಂಬಲ ಕಳೆದುಕೊಂಡಿದೆ. ಯಾವುದೇ ಕಾರಣಕ್ಕೂ ಉದ್ಧವ್ ಠಾಕ್ರೆ ಸರ್ಕಾರಕ್ಕೆ ನಾವು ಬೆಂಬಲ ನೀಡಲ್ಲ. ನಾವು 39 ಶಾಸಕರು ಸರ್ಕಾರದಿಂದ ಹೊರ ಬಂದಿದ್ದು ಬೆಂಬಲ ಹಿಂಪಡೆದಿದ್ದೇವೆ ಎಂದಿದ್ದಾರೆ ಶಿಂಧೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post