ಬೆಂಗಳೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿರೋ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಜರಾಜೇಶ್ವರಿ ಮೃತ ದುರ್ದೈವಿ.
ಇದನ್ನು ಓದಿ: ಕೆಂಗೇರಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ..!
ಸದ್ಯ ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸ್ ಅಧಿಕಾರಿಗಳು ರಾಮಸಂದ್ರದ ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹ ಪತ್ತೆಯಾಗಿರೋ ಜಾಗದಲ್ಲಿ ಮದ್ಯದ ಬಾಟಲಿಗಳು ಹಾಗೂ ಚಪ್ಪಲಿ ಕೂಡ ಪತ್ತೆಯಾಗಿದೆ. ಸದ್ಯ ಪೊಲೀಸರು ಎಲ್ಲ ಸಾಕ್ಷಾಧಾರಗಳನ್ನು ವಶಪಡಿಸಿಕೊಂಡು ಮತಷ್ಟು ಹೆಚ್ಚಿನ ತನಿಖೆ ಮಾಡಲು ಮುಂದಾಗಿದ್ದಾರೆ.
ಇನ್ನು ನಿರ್ಜನ ಪ್ರದೇಶ ಮರವೊಂದರ ಕೆಳಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮಹಿಳೆಯನ್ನು ಅತ್ಯಾಚಾರ ಮಾಡಿ ಸುಟ್ಟು ಹಾಕಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ರಾಜರಾಜೇಶ್ವರಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಘಟನೆಯು ಕೆಂಗೇರಿಯ ರಾಮಸಂದ್ರ ವ್ಯಾಪ್ತಿಯಲ್ಲಿ ನಡೆದಿದೆ. ಈ ದುರ್ಘಟನೆಯು ಕಳೆದ ಎರಡ್ಮೂರು ದಿನದ ಹಿಂದೆ ನಡೆದಿರಬಹುದು ಎಂದು ಮಾಹಿತಿ ಲಭ್ಯವಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post