ಬಾಗಲಕೋಟೆ: ಸಿದ್ದರಾಮೋತ್ಸವಕ್ಕೆ ಹೊರಟಿದ್ದ ಕ್ರೂಸರ್ ಪಲ್ಟಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಬಾದಾಮಿ ತಾಲೂಕಿನ ಹೂಲಗೇರಿ ಸಮೀಪ ನಡೆದಿದೆ. ಪ್ರಕಾಶ್ ಕಂಬಾರ (35) ಮೃತ ದುರ್ದೈವಿ.
ಸಿದ್ದರಾಮೋತ್ಸವಕ್ಕೆಂದು ದಾವಣಗೆರೆಗೆ ತೆರಳುತ್ತಿದ್ದ ಕ್ರೂಸರ್ ವಾಹನ ಪಲ್ಟಿಯಾಗಿ ಸಾವನ್ನಪ್ಪಿದ್ದಾರೆ. ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿವೆ. ಮೃತ ವ್ಯಕ್ತಿಯು ಬೀಳಗಿ ತಾಲ್ಲೂಕಿನ ಚಿಕ್ಕ ಆಲಗುಂಡಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.
ಸದ್ಯ ಸ್ಥಳಕ್ಕೆ ಕೆರೂರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ದುರ್ಘಟನೆಯು ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post