ಅಮೆರಿಕ ಸಂಸತ್ತಿನ ಸ್ಪೀಕರ್ ನ್ಯಾನ್ಸಿ ಪೆಲೋಸಿ ತೈವಾನ್‌ಗೆ ಹೋದರೆ ಅದಕ್ಕೆ ತಕ್ಕ ಬೆಲೆಯನ್ನು ಅಮೆರಿಕ ತೆರಬೇಕಾಗುತ್ತದೆ ಎಂದು ಚೀನಾ ಎಚ್ಚರಿಕೆ ನೀಡಿದೆ. ಹೀಗಿದ್ದೂ ಕೆಲವೇ ಹೊತ್ತಿನಲ್ಲಿ ಸ್ಪೀಕರ್ ನ್ಯಾನ್ಸಿ ಪೆಲೋಸಿ ತೈವಾನ್‌ಗೆ ಲ್ಯಾಂಡ್ ಆಗಲಿದ್ದಾರೆ.
ನ್ಯಾನ್ಸಿ ಪೆಲೋಸಿ ತೈವಾನ್‌ಗೆ ಬರುತ್ತಿರೋದನ್ನ ವಿರೋಧಿಸಿ ಮಾತನಾಡಿರುವ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನ್ಯಿಂಗ್.. ಇದು ಯುಎಸ್ ಕೊನೆಯ ಜವಾಬ್ದಾರಿಯಾಗಿದೆ. ಚೀನಾದ ಸಾರ್ವಭೌಮತ್ವ ಮತ್ತು ಭದ್ರತಾ ಹಿತಾಸಕ್ತಿಗಳನ್ನು ದುರ್ಬಲಗೊಳಿಸುತ್ತಿರುವ ಅಮೆರಿಕ ಅದಕ್ಕೆ ತಕ್ಕ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಎಚ್ಚರಿಕೆಯನ್ನ ನೀಡಿದ್ದಾರೆ.
ವರದಿಗಳ ಪ್ರಕಾರ, ನ್ಯಾನ್ಸಿ ಪೆಲೋಸಿ ಅವರು US ವಾಯುಪಡೆಯ ರಕ್ಷಣೆಯೊಂದಿಗೆ ತೈವಾನ್ ಸಮೀಪಿಸುತ್ತಿದ್ದಾರೆ. ಇದಕ್ಕೆ ವಿರುದ್ಧವಾಗಿ ಚೀನಾ ಯುದ್ಧದ ಟ್ಯಾಂಕ್ ಮತ್ತು ಇತರೆ ಶಸ್ತ್ರಾಸ್ತ್ರಗಳನ್ನು ನಿಯೋಜಿಸಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸದ್ಯದ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post