ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಗೆ ಸೇರಿದ ನ್ಯಾಷನಲ್ ಹೆರಾಲ್ಡ್ ಯಂಗ್ ಇಂಡಿಯನ್ ಕಚೇರಿಯನ್ನು ಇಡಿ ಅಧಿಕಾರಿಗಳು ಸೀಲ್ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಈಗ ತನಿಖೆ ನಡೆಯುತ್ತಿದೆ. ಹೀಗಾಗಿ ಯಾವುದೇ ಕಾರಣಕ್ಕೂ ತನಿಖಾ ಸಂಸ್ಥೆ ಪೂರ್ವಾನುಮತಿ ಪಡೆಯದೆ ಕಚೇರಿ ತೆರೆಯಬಾರದು ಎಂದು ಆದೇಶಿಸಿ ಇಡಿ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ಕಾಂಗ್ರೆಸ್ ವರಿಷ್ಠರು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಇಡಿ ಅಧಿಕಾರಿಗಳು ನ್ಯಾಷನಲ್ ಹೆರಾಲ್ಡ್ ಕಚೇರಿ ಸೇರಿ 12 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಇದಾದ ಮರು ದಿನವೇ ಕಚೇರಿಯನ್ನು ಸೀಲ್ ಮಾಡಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post