ಮಂಗಳೂರು: ದ್ವಿಚಕ್ರ ವಾಹನಗಳ ಹಿಂಬದಿಯಲ್ಲಿ ಪುರುಷ ಸವಾರರಿಗೆ ಅವಕಾಶ ಇಲ್ಲ ಎಂಬ ಆದೇಶವನ್ನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಪಸ್ ಪಡೆಯಲಾಗಿದೆ. ಇಂದು ಬೆಳಗ್ಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು, ನಾಳೆಯಿಂದ ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ವಾಹನ ಸವಾರರಿಗೆ ಅವಕಾಶ ಇಲ್ಲ ಎಂದು ಹೇಳಿಕೆ ನೀಡಿದ್ದರು.
ಯಾಕೆ ಆದೇಶ ವಾಪಸ್..?
ಇದೀಗ ಮಂಗಳೂರು ಪೊಲೀಸ್ ಕಮಿಷನರ್ ಶಿಶಿಕುಮರ್ ಈ ಆದೇಶವನ್ನ ವಾಪಸ್ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ನಿರ್ಬಂಧಗಳಿವೆ. ಬೈಕ್ ಹಿಂಬದಿ ಸವಾರರ ನಿರ್ಬಂಧ ಸದ್ಯಕ್ಕೆ ಅವಶ್ಯಕತೆ ಇಲ್ಲ. ಅವಶ್ಯಕತೆ ಇದ್ದರೆ ಮುಂದಿನ ದಿನಗಳಲ್ಲಿ ಜಾರಿ ಮಾಡಲು ನಿರ್ಧರಿಸಿದ್ದೇವೆ. ಹೀಗಾಗಿ ನಿರ್ಬಂಧ ಆದೇಶವನ್ನ ವಾಪಸ್ ಪಡೆಯುತ್ತಿದ್ದೇವೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಇದನ್ನೂ ಓದಿ: ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಪುರುಷ ಸವಾರರಿಗೆ ಅವಕಾಶ ಇಲ್ಲ- ಮಂಗಳೂರಲ್ಲಿ ಹೊಸ ರೂಲ್ಸ್
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post