ತುಮಕೂರು: ಮರದಲ್ಲಿ ಹಲಸಿನ ಹಣ್ಣು ಕೀಳಲು ಹೋಗಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಪಾವಗಡ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್ (20) ಮೃತ ದುರ್ದೈವಿ.
ಯುವಕ ಮರದಲ್ಲಿ ಹಲಸಿನ ಹಣ್ಣು ಕೀಳಲು ಹೋಗಿದ್ದಾಗ ವಿದ್ಯುತ್ ತಂತಿ ಕಟ್ಟಾಗಿ ಬಿದ್ದಿತ್ತು. ಈ ವೇಳೆ ಯುವಕನ ಕಾಲಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಯುವಕನು ಬೊಮ್ಮನಹಳ್ಳಿ ಗ್ರಾಮದ ಕೃಷ್ಣಪ್ಪ ಎಂಬುವವರ ಮಗ ರಮೇಶ್.
ಸದ್ಯ ಸ್ಥಳಕ್ಕೆ ಸ್ಥಳೀಯ ಶಾಸಕ ವೆಂಕಟರಮಣಪ್ಪ, ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು, ಶಾಸಕ ವೆಂಕಟರಮಣಪ್ಪ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ದುರ್ಘಟನೆ ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post