ಮಾಜಿ ಮಂತ್ರಿ, ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪಗೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಇನ್ನಿಲ್ಲದಂತೆ ಸತಾಯಿಸ್ತಿದೆ. ಈಗಾಗಲೇ ಪ್ರಕರಣದ ತನಿಖೆ ಮಾಡಿದ್ದ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ರೂ ಈಶ್ವರಪ್ಪಗೆ ಸಂಕಷ್ಟ ತಪ್ಪಿಲ್ಲ. ಉಡುಪಿ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಸಂತೋಷ್ ಸಹೋದರ ಕೋರ್ಟ್ ಮೊರೆ ಹೋಗಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ.
ಮಾಜಿ ಮಂತ್ರಿ ಕೆ.ಎಸ್. ಈಶ್ವರಪ್ಪಗೆ ಮತ್ತೆ ಸಂಕಷ್ಟ!
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ, ಮಾಜಿ ಮಂತ್ರಿ ಕೆ.ಎಸ್.ಈಶ್ವರಪ್ಪರನ್ನ ಮತ್ತೆ ಸಂಕಷ್ಟದ ದವಡೆಗೆ ತಳ್ಳುತ್ತಿದೆ. ಪ್ರಕರಣ ಸಂಬಂಧ ಈಗಾಗಲೇ ಉಡುಪಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ರು. ಆದ್ರೆ ಬಿ ರಿಪೋರ್ಟ್ಗೆ ಸಂತೋಷ್ ಸಂಬಂಧಿಕರು ಸುತಾರಾಮ್ ಒಪ್ತಿಲ್ಲ. ಪೊಲೀಸರು ಪ್ರಭಾವಕ್ಕೆ ಒಳಗಾಗಿ ಸರಿಯಾದ ತನಿಖೆ ನಡೆಸಿಲ್ಲ ಅಂತ ಸಂತೋಷ್ ಸಂಬಂಧಿಕರು ನೇರವಾಗಿ ಆರೋಪ ಮಾಡಿದ್ರು. ಇಷ್ಟೆಲ್ಲ ನಡೆದ ಬಳಿಕ ಸಂತೋಷ್ ಸಂಬಂಧಿಕರು ಮತ್ತೊಮ್ಮೆ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಉಡುಪಿ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ.
ಉಡುಪಿ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ದೊಡ್ಡವರ ಪ್ರಭಾವಕ್ಕೆ ಒಳಗಾಗಿ ಪೊಲೀಸರು ತನಿಖೆ ಮಾಡಿದ್ದಾರೆ. ಹೀಗಾಗಿ ಪ್ರಕರಣವನ್ನು ಬೇರೆ ತನಿಖಾ ಸಂಸ್ಥೆಗೆ ವಹಿಸಬೇಕು ಅಂತ ಕೋರಿದ್ದಾರೆ. ಈ ಬಗ್ಗೆ ಸಿಟಿ ಸಿವಿಲ್ ಕೋರ್ಟ್ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೃತ ಸಂತೋಷ್ ಸಹೋದರ ಪ್ರಶಾಂತ್ ಪಾಟೀಲ್ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಗುತ್ತಿಗೆ ಕಾಮಾಗಾರಿಯ ಹಣ ಬಿಡುಗಡೆ ಮಾಡಿಲ್ಲ ಅಂತ ಸಂತೋಷ್ ಪಾಟೀಲ್ ನೇರವಾಗಿ ಆರೋಪಿಸಿದ್ರು. ಜೊತೆಗೆ ಬಿಲ್ ಮಂಜೂರು ಮಾಡಲು ಕೆ.ಎಸ್.ಈಶ್ವರಪ್ಪ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಅಂತ ಗಂಭೀರವಾಗಿ ಆರೋಪಿಸಿದ್ರು. ಇದಾದ ಕೆಲವೇ ತಿಂಗಳಲ್ಲೇ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ವೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.
ಸಂತೋಷ್ ಆತ್ಮಹತ್ಯೆ ಕೇಸಲ್ಲಿ ಕಾನೂನು ಸಮರ!
ಅಂದು ಸಂತೋಷ್ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿದ್ದ ಉಡುಪಿ ಪೊಲೀಸರು ಇತ್ತೀಚಿಗಷ್ಟೇ ಬಿ ರಿಪೋರ್ಟ್ ಸಲ್ಲಿಸಿದ್ರು. ಆದ್ರೆ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ನ್ನ ಪ್ರಶ್ನಿಸಿ, ಸಂತೋಷ್ ಪಾಟೀಲ್ ಕುಟುಂಬಸ್ಥರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇದು ಮಾಜಿ ಮಂತ್ರಿಗೆ ಮತ್ತಷ್ಟು ಕಂಟಕ ತರುತ್ತಾ ಅನ್ನೋದು ನೋಡಬೇಕಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post