ಚಿಕ್ಕೋಡಿ: ಹೆಂಡತಿಯ ಸಾವಿನಿಂದ ಮನನೊಂದ ಪತಿಯೋರ್ವ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಡೆದಿದೆ.
ಸದಾಶಿವ ರಾಮಪ್ಪ ಕಾಂಬಳೆ (26) ಆತ್ಮಹತ್ಯೆ ಶರಣಾದ ವ್ಯಕ್ತಿಯಾಗಿದ್ದು, ರಾಮಪ್ಪ ಅವರ ಪತ್ನಿ ರೂಪಾ ಸದಾಶಿವ ಕಾಂಬಳೆ (21) ಅನಾರೋಗ್ಯದಿಂದ ಕಳೆದ ಎರಡು ದಿನದ ಹಿಂದೆ ಸಾವನ್ನಪ್ಪಿದ್ದರು. ಇದರಿಂದ ಮನನೊಂದಿದ್ದ ರಾಮಪ್ಪ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.
ಕೂಡಲೇ ಬೆಂಕಿಯನ್ನು ನಂದಿಸಿದ್ದ ಕುಟುಂಬಸ್ಥರು, ಆತನನ್ನು ವಿಜಯಪುರ ಜಿಲ್ಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಪ್ರಯತ್ನ ಮಾಡಿದ್ದರು. ಆದರೆ ಶೇ.80ರಷ್ಟು ದೇಹ ಸುಟ್ಟು ಹೋಗಿದ್ದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ ಸಾವನ್ನಪ್ಪಿದ್ದಾರೆ. ರಾಮಪ್ಪ ಹಾಗೂ ರೂಪಾ ಕೆಲ ವರ್ಷಗಳ ಹಿಂದೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಘಟನೆ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post