ಗದಗ: ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋ ಘಟನೆ ನರಗುಂದ ತಾಲೂಕಿನ ಕಲಕೇರಿ ಗ್ರಾಮದ ಬಳಿ ನಡೆದಿದೆ. ಬಸವರಡ್ಡಿ (50) ಹನುಮಂತಗೌಡ (48) ಮೃತ ದುರ್ದೈವಿಗಳು.
ಗದಗದಿಂದ ನರಗುಂದ ಕಡೆಗೆ ಹೊರಟ್ಟಿದ ಬಸ್ ಹಾಗೂ ಬಾಗಲಕೋಟೆ ಕಡೆಯಿಂದ ನವಲಗುಂದಕ್ಕೆ ಹೋಗುತ್ತಿದ್ದ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಅವರನ್ನು ನವಲಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಸ್ಥಳಕ್ಕೆ ನರಗುಂದ ಡಿವೈಎಸ್ಪಿ ವೈ ಎಸ್ ಏಗನ ಗೌಡರ್, ಸಿಪಿಐ ಮಲ್ಲಯ್ಯ ಮಠಪತಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post