ಹೈದರಾಬಾದ್: ಚುನಾವಣೆ ಹತ್ರ ಬಂತು ಅಂದ್ರೆ ಸಾಕು, ರಾಜಕೀಯ ವಲಯದಲ್ಲಿ ನಾನಾ ಬದಲಾವಣೆಗಳು ಕಂಡುಬರುತ್ತವೆ. ವರಿಷ್ಠರನ್ನ ಭೇಟಿಯಾಗಲು ರಾತ್ರೋ ರಾತ್ರಿ ಪ್ಲೈಟ್ ಹತ್ತಿ ತೆರಳ್ತಾರೆ. ಇದೀಗ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಮತ್ತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾಗ್ತಾಯಿದ್ದು, ಉಭಯ ನಾಯಕರ ಭೇಟಿ ರಾಷ್ಟ್ರಮಟ್ಟದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ರಾಷ್ಟ್ರೀಯ ಪಕ್ಷಗಳ ವಿರುದ್ಧ ಪ್ರಾದೇಶಿಕ ಪಕ್ಷಗಳ ಕದನ..?
ಮಹತ್ವ ಪಡೆದ ಪ್ರಾದೇಶಿಕ ಪಕ್ಷಗಳ ನಾಯಕರ ಭೇಟಿ
ತೆಲಂಗಾಣ ಸಿಎಂ ಕೆಸಿಆರ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಹೈದರಾಬಾದ್ನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಿದ್ದು, ಮಾಜಿ ಮುಖ್ಯಮಂತ್ರಿಗಳಿಗೆ ತೆಲಂಗಾಣ ಸರಕಾರದಿಂದ ರಾಜಾಥಿತ್ಯ ಸಿಗಲಿದೆ. ಇನ್ನ ಈ ಸಭೆಯಲ್ಲಿ ಇಬ್ಬರೂ ನಾಯಕರು ಕರ್ನಾಟಕ, ತೆಲಂಗಾಣ ರಾಜಕೀಯ ಹಾಗೂ ಅದರಲ್ಲೂ ರಾಷ್ಟ್ರಮಟ್ಟದ ರಾಜಕಾರಣದ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ-ತೆಲಂಗಾಣ ರಾಜ್ಯಗಳ ವಿಷಯಗಳು ಹಾಗೂ ರಾಷ್ಟ್ರ ರಾಜಕಾರಣಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.
ಶ್ರೀ ಕೆಟಿಆರ್ ಅವರ ಆದರಾಭಿಮಾನ, ವಿಶ್ವಾಸ, ಗೌರವಕ್ಕೆ ನನ್ನ ಮನಸ್ಸು ತುಂಬಿಬಂದಿದೆ.2/2 pic.twitter.com/EGfv6OQwOd— H D Kumaraswamy (@hd_kumaraswamy) September 11, 2022
ಕಳೆದ ಮೇ ತಿಂಗಳಲ್ಲಿ ಕೆ.ಚಂದ್ರಶೇಖರ್ ರಾವ್ ಬೆಂಗಳೂರಿಗೆ ಆಗಮಿಸಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯನ್ನ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದರು. ಸದ್ಯ ರಾಜಕೀಯ ವಲಯದಲ್ಲಿ ಈ ಇಬ್ಬರು ನಾಯಕರ ಭೇಟಿಯನ್ನು ಬಹಳ ಮಹತ್ವದ ರಾಜಕೀಯ ಬೆಳವಣಿಗೆ ಎಂದು ಬಣ್ಣಿಸಲಾಗಿದೆ.
ನಿತೀಶ್ ಕುಮಾರ್ ಬಳಿಕ ಕೆಸಿಆರ್ ಜೊತೆ ಮಾತುಕತೆ!
ಇತ್ತೀಚೆಗಷ್ಟೇ ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಕೆಸಿಆರ್ ಇಂದು ಮಾಜಿ ಸಿಎಂ ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಈ ಭೇಟಿಯ ಭಾಗವಾಗಿ ಬೆಳಗಿನ ಉಪಹಾರವನ್ನು ತೆಲಂಗಾಣ ಸಚಿವ, ಸಿಎಂ ಕೆಸಿಆರ್ ಪುತ್ರ ಕೆ.ಟಿ ರಾಮರಾವ್ ಅವರೊಂದಿಗೆ ಮಾಡಿದ್ದಾರೆ. ಈ ಕುರಿತು ಸ್ವತಃ ಹೆಚ್ಡಿ ಕುಮಾರಸ್ವಾಮಿ ಅವರೇ ಟ್ವಿಟರ್ನಲ್ಲಿ ಮಾಹಿತಿ ನೀಡಿದ್ದಾರೆ. ತೆಲಂಗಾಣ ರಾಜ್ಯದ ಮಾನ್ಯ ಪೌರಾಡಳಿತ, ನಗರಾಭಿವೃದ್ಧಿ, ಕೈಗಾರಿಕೆ, ವಾಣಿಜ್ಯ, ಮಾಹಿತಿ ತಂತ್ರಜ್ಞಾನ ಮತ್ತು ಸಂಪರ್ಕ ಖಾತೆ ಸಚಿವರಾದ ಕೆಟಿಆರ್ ಅವರನ್ನು ಹೈದರಾಬಾದ್ʼನಲ್ಲಿ ಭೇಟಿ ಮಾಡಿ ಚರ್ಚೆ ನಡೆಸಲಾಯಿತು. ಪ್ರಖರ ದೂರದೃಷ್ಟಿಯುಳ್ಳ, ನವೀನ ವಿಚಾರಗಳ, ಸದೃಢ ನಾಯಕತ್ವ-ವ್ಯಕ್ತಿತ್ವದ ಅವರೊಂದಿನ ಚರ್ಚೆ ಬಹಳ ಅರ್ಥಪೂರ್ಣವಾಗಿತ್ತು. ಈ ಸಂದರ್ಭದಲ್ಲಿ ಕರ್ನಾಟಕ-ತೆಲಂಗಾಣ ರಾಜ್ಯಗಳ ವಿಷಯಗಳು ಹಾಗೂ ರಾಷ್ಟ್ರ ರಾಜಕಾರಣಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಶ್ರೀ ಕೆಟಿಆರ್ ಅವರ ಆದರಾಭಿಮಾನ, ವಿಶ್ವಾಸ, ಗೌರವಕ್ಕೆ ನನ್ನ ಮನಸ್ಸು ತುಂಬಿಬಂದಿದೆ ಎಂದು ಬರೆದುಕೊಂಡಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post