ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣ ಒಂದಕ್ಕೆ ಸಂಬಂಧಿಸಿ ಹೈಕೋರ್ಟ್ ರದ್ದು ಮಾಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ತಡೆ ನೀಡಿದ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
2018ರಲ್ಲಿ ಬಿಡದಿಯ ಈಗಲ್ ಟನ್ ರೆಸಾರ್ಟ್ನಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಡಿ.ಕೆ ಶಿವಕುಮಾರ್ ಇದ್ದ ಕೋಣೆಯಲ್ಲಿ ಹಣಕಾಸು ವರ್ಗಾವಣೆಗೆ ಸಂಬಂಧಿಸಿದ ದಾಖಲೆಗಳು ಸಿಕ್ಕಿದ್ದವು ಎನ್ನಲಾಗಿತ್ತು.
ಈ ಪ್ರಕರಣದ ತನಿಖೆಯನ್ನ ಐಟಿ ಅಧಿಕಾರಿಗಳು ನಡೆಸುತ್ತಿದ್ದರು. ಆದರೆ ಡಿಕೆ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿ ಐಟಿ ವಿಚಾರಣೆಗೆ ತಡೆ ತಂದಿದ್ದರು. ಆರೋಪಿಯಿಂದ ಬರೀ ಹಣಕಾಸು ವ್ಯವಹಾರಗಳು ನಡೆದಿದ್ದರೆ ಮೊಕದ್ದಮೆ ದಾಖಲಿಸಲು ಸಾಧ್ಯವಿಲ್ಲ. ಲೆಕ್ಕವಿಲ್ಲದ ವಹಿವಾಟುಗಳು ನಡೆದಿದ್ದರೂ ತೆರಿಗೆ ಅಥವಾ ದಂಡದ ಪಾವತಿಗೆ ಹೊಣೆಗಾರರಾಗಿದ್ದಾರೆ ಎಂದು ನಿರ್ಧರಿಸುವವರೆಗೆ ಯಾವುದೇ ಕಾನೂನು ಕ್ರಮವನ್ನು ಪ್ರಾರಂಭಿಸಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದ ಹೈಕೋರ್ಟ್, ಪ್ರಕರಣವನ್ನ ವಜಾ ಮಾಡಿತ್ತು. ಹೈಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಿತ್ತು.
ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್ ಐಟಿ ಅಧಿಕಾರಿಗಳು ಅರ್ಜಿ ಹಾಕಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post