ಬೆಂಗಳೂರು: ಟಿ.ಎ.ಶರವಣ ಅವರನ್ನ ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ನ ಶಾಸಕಾಂಗ ಪಕ್ಷದ ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಅಧಿಕೃತ ಆದೇಶವನ್ನ ನೀಡಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಜನತಾ ದಳದ ಶಾಸಕಾಂಗ ಪಕ್ಷದ ಉಪನಾಯಕರನ್ನಾಗಿ ಶರವಣರನ್ನ ಆಯ್ಕೆ ಮಾಡಲಾಗಿದೆ. ಹೀಗಾಗಿ ವಿಧಾನ ಪರಿಷತ್ತಿನಲ್ಲಿ ಶಾಸಕಾಂಗ ಪಕ್ಷದ ಉಪ ನಾಯಕರನ್ನಾಗಿ ಈ ಕ್ಷಣದಿಂದ ಜಾರಿಗೆ ಬರುವಂತೆ ಕೋರುತ್ತೇನೆ ಎಂದು ಸಿಎಂ ಇಬ್ರಾಹಿಂ ಆದೇಶ ನೀಡಿದ್ದಾರೆ.
ಇನ್ನು, ಮೊನ್ನೆ ನಡೆದ ಕಲಾಪದಲ್ಲಿ ರಾಜ್ಯದಲ್ಲಿ ಕೇಳಿಬಂದಿದ್ದ ಬಿಟ್ಕಾಯಿನ್ ಹಗರಣದ ಬಗ್ಗೆ ಶರವಣ ಪ್ರಸ್ತಾಪ ಮಾಡಿದ್ದರು. ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಟ್ ಕಾಯಿನ್ ಪ್ರಕರಣಕ್ಕೆ ಸುದೀರ್ಘ ಉತ್ತರವನ್ನ ನೀಡಿದ್ದರು.
ಇದನ್ನೂ ಓದಿ: ಬಿಟ್ ಕಾಯಿನ್ ಹಗರಣದ ಬಗ್ಗೆ ಅಮೆರಿಕದಲ್ಲೂ ತನಿಖೆ ನಡೆದಿದೆ -ಶರವಣ ಪ್ರಶ್ನೆಗೆ ಸರ್ಕಾರ ಉತ್ತರ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post