ಪಾಕಿಸ್ತಾನದಲ್ಲಿ ನಡೆದ ಕ್ರಿಕೆಟ್ ಪಂದ್ಯವೊಂದರಲ್ಲಿ ಆಟಗಾರನೊಬ್ಬ ಮೈದಾನದಲ್ಲಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಪಾಕಿಸ್ತಾನ್ ಕಾರ್ಪೋರೇಟರ್ ಲೀಗ್ನಲ್ಲಿ ಈ ದುರಂತ ನಡೆದಿದೆ. ಪಂದ್ಯ ನಡೆಯುತ್ತಿರುವಾಗ ಫೀಲ್ಡಿಂಗ್ ಮಾಡ್ತಿದ್ದ ಉಸ್ಮಾನ್ ಶಿನ್ವಾರಿ ಎಂಬಾತನಿಗೆ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ತಕ್ಷಣ ಅವರನ್ನ ಆಸ್ಪತ್ರೆಗೆ ಕರೆದೊಯ್ದರು. ಆದ್ರೆ, ಅದಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜಾಲತಾಣದಲ್ಲಿ ವಿಡಿಯೋ ಸಖತ್ ವೈರಲ್ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post