ಕೊಪ್ಪಳ: ಐಎಸ್ಐಎಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಶಂಕಿತ ವ್ಯಕ್ತಿಯನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಶಬ್ಬೀರ್ ಬಂಧಿತ ಶಂಕಿತನಾಗಿದ್ದು, ಆರೋಪಿಯು ಗಂಗಾವತಿಯ ಬನ್ನಿಗಿಡ ಕ್ಯಾಂಪನಲ್ಲಿ ಹೋಲ್ ಸೇಲ್ ಹಣ್ಣು ವ್ಯಾಪಾರ ಮಾಡಿಕೊಂಡಿದ್ದ. ಹಣ್ಣು ವ್ಯಾಪಾರ ಮಾಡೋ ನೆಪದಲ್ಲಿ ಶಿವಮೊಗ್ಗ ಸೇರಿದಂತೆ ಹಲವಡೆ ಈತ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಪೊಲೀಸರಿಗೆ ಅನುಮಾನ ಬಂದ ಹಿನ್ನಲೆಯಲ್ಲಿ ತಡರಾತ್ರಿ ಹಣ್ಣಿನ ಅಂಗಡಿಯ ಮೇಲೆ ಏಕಾಏಕಿ ದಾಳಿ ನಡೆಸಿ ಶಬ್ಬೀರ್ ನನ್ನು ವಶಕ್ಕೆ ಪಡೆದಿದ್ದಾರೆ.
ಸದ್ಯ ಬಂಧಿತ ಆರೋಪಿಯ ಮೊಬೈಲ್ ವಶಪಡಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಈ ವಿಚಾರ ತಿಳಿಯುತ್ತಿದ್ದಂತೆ ಗಂಗಾವತಿ ಜನತೆ ಬೆಚ್ಚಿಬಿದ್ದಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಗಂಗಾವತಿ ನಗರ ಪೊಲೀಸ್ ಅಧಿಕಾರಿಗಳು ಸೂಕ್ಷ್ಮ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post