ಬೆಂಗಳೂರು: ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ.. ಇಂದು ನಾನು ನಾಮಪತ್ರ ಸಲ್ಲಿಸಿದ್ದೇನೆ. ಎಲ್ಲಾ ನಾಯಕರು, ಕಾರ್ಯಕರ್ತರು, ಹಿರಿಯ ಮುಖಂಡರು, ಹಲವು ರಾಜ್ಯಗಳ ನಾಯಕರು ಬೆಂಬಲಿಸಿದ್ದಾರೆ. ಎಲ್ಲರಿಗೂ ಧನ್ಯವಾದ ಎಂದಿದ್ದಾರೆ.
ಈ ಬಗ್ಗೆ ನಾನು ಹೆಚ್ಚು ಹೇಳುವುದು ಇಲ್ಲ. 17ಕ್ಕೆ ಮತದಾನ, 19 ಫಲಿತಾಂಶ ಹೊರಬೀಳಲಿದೆ. ಹೆಚ್ಚಿನ ಬಹುಮತದಿಂದ ಗೆದ್ದು ಬರುವ ವಿಶ್ವಾಸ ಇದೆ. ನಾನು ಸದಾ ಹೋರಾಟ ಮಾಡಿಕೊಂಡೇ ಬಂದಿದ್ದೇನೆ. ಈಗಲೂ ಹೋರಾಟ ಮಾಡುತ್ತೇನೆ. ಕಾಂಗ್ರೆಸ್ ಸಿದ್ಧಾಂತದೊಂದಿಗೆ ನಾನು ಬಾಲ್ಯದಿಂದಲೂ ಬೆಸೆದುಕೊಂಡಿದ್ದೇನೆ. ಇಂದಿರಾಗಾಂಧಿ ಅವರು ಕಲಬುರಗಿಗೆ ಬಂದು ನಮಗೆಲ್ಲಾ ಸ್ಫೂರ್ತಿ ತುಂಬಿದ್ದರು. ಹಾಗಾಗಿಯೇ ಕಾಂಗ್ರೆಸ್ನಲ್ಲಿ ಕೆಲಸ ಮಾಡಲು ಇಚ್ಚಿಸಿದ್ದು ಎಂದು ಖರ್ಗೆ ಹೇಳಿದ್ದಾರೆ.
ಕೊನೆ ಕ್ಷಣದಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದನ್ನ ಖಚಿತಪಡಿಸಿದ್ದಾರೆ. ಗಾಂಧಿ ಕುಟುಂಬದ ಬೆಂಬಲಿತ ಅಭ್ಯರ್ಥಿಯಾಗಿ ಖರ್ಗೆ ಚುನಾವಣೆಗೆ ನಿಂತಿದ್ದಾರೆ. ಅತ್ತ ಖರ್ಗೆ ವಿರುದ್ಧ ಕಾಂಗ್ರೆಸ್ನ ಮತ್ತೊಬ್ಬ ಹಿರಿಯ ನಾಯಕ ಶಶಿ ತರೂರ್ ನಿಂತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post