ಹೈದರಾಬಾದ್: ಟಿಆರ್‌ಎಸ್ ಪಕ್ಷದ ಹೆಸರನ್ನು ಬಿಆರ್‌ಎಸ್ ಎಂದು ತೆಲಂಗಾಣದ ಸಿಎಂ ಚಂದ್ರಶೇಖರ್ ರಾವ್ ಬದಲಾಯಿಸಿದ್ದಾರೆ. ಈ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜೆಡಿಎಸ್ ನಾಯಕ ಕುಮಾರಸ್ವಾಮಿ ಸೇರಿ 20 ಶಾಸಕರು ಭಾಗಿಯಾಗಿದ್ದರು. ಇದರ ಬೆನ್ನಲ್ಲೆ ಮಾಜಿ ಕುಮಾರಸ್ವಾಮಿ ಹೊಸ ಘೋಷಣೆ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಆರ್‌ಎಸ್ ಮೈತ್ರಿ ಅಂದಿದ್ದಾರೆ.
2023ರ ಕರ್ನಾಟಕ ಚುನಾವಣೆ, 2024ರ ಲೋಕಸಭೆ ಚುನಾವಣೆಯಲ್ಲಿ ಜನತಾ ದಳ ಹಾಗೂ ಬಿಆರ್‌ಎಸ್ ಪಕ್ಷ ಒಟ್ಟಾಗಿ ಕೆಲಸ ಮಾಡಲಿದೆ ಎಂದು ಕುಮಾರಸ್ವಾಮಿ ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಹೆಚ್ಡಿಕೆ ತಿಳಿಸಿದ್ದಾರೆ. ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರದಲ್ಲಿ ʼಬಿಜೆಪಿ-ಕಾಂಗ್ರೆಸ್ ಮುಕ್ತ ರಾಜಕೀಯʼ ಸ್ಥಿತಿ ಇದೆ. ಅದೇ ಸ್ಥಿತಿ ರಾಜ್ಯದಲ್ಲೂ ತರಲು ನಾನು, ಶ್ರೀ ಕೆಸಿಆರ್ ನಿರ್ಧಾರ ಮಾಡಿದ್ದೇವೆ ಅಂತ ಬರೆದುಕೊಂಡಿದ್ದಾರೆ.
ರಾಷ್ಟ್ರ ರಾಜಕಾರಣದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯವಿತ್ತು. ಕೆಲ ಪಕ್ಷಗಳ ʼರಾಜಕೀಯ ಏಕಸ್ವಾಮ್ಯತೆʼ ದೇಶಕ್ಕೆ ಮಾರಕ. ಇದಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಹೊಸ ರಾಜಕೀಯ ಶಕ್ತಿ ಬೇಕಿತ್ತು. ಬಿಆರ್ ಎಸ್ ಒಂದು ʼಪ್ರಬಲ ಪರ್ಯಾಯʼ ಎನ್ನುವುದು ನನ್ನ ಭಾವನೆ. ಬಿಆರ್‌ಎಸ್ ಸ್ಥಾಪನೆ ನಾನು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ ಅಂತ ಹೆಚ್ಡಿಕೆ ಹೇಳಿದ್ದಾರೆ.
2023ರ ಕರ್ನಾಟಕ ಚುನಾವಣೆ, 2024ರ ಲೋಕಸಭೆ ಚುನಾವಣೆಯಲ್ಲಿ @JanataDal_S & @trspartyonline (BRS) ಒಟ್ಟಾಗಿ ಕೆಲಸ ಮಾಡಲಿವೆ. ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರದಲ್ಲಿ ʼಬಿಜೆಪಿ-ಕಾಂಗ್ರೆಸ್ ಮುಕ್ತ ರಾಜಕೀಯʼ ಸ್ಥಿತಿ ಇದೆ. ಅದೇ ಸ್ಥಿತಿಯನ್ನು ರಾಜ್ಯದಲ್ಲೂ ತರಲು ನಾನು, ಶ್ರೀ ಕೆಸಿಆರ್ ನಿರ್ಧಾರ ಮಾಡಿದ್ದೇವೆ.1/4#JDS #BRS pic.twitter.com/OKLxBqGyEU
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 5, 2022
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post