ರಾಯಚೂರು: ‘ಭಾರತ್ ಜೋಡೋ’ ಯಾತ್ರೆಯಲ್ಲಿ ಮೋಹಕ ತಾರೆ ನಟಿ ರಮ್ಯಾ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ರಾಹುಲ್ ಗಾಂಧಿ ಜೊತೆ ಮೋಹಕ ತಾರೆ ರಮ್ಯಾ ಐಕ್ಯತಾ ಯಾತ್ರೆಯಲ್ಲಿ ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ. ಯಾತ್ರೆಯ ಬಳಿಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡರು ಸೇರಿಕೊಂಡು ಕಾರ್ನರ್ ಮೀಟಿಂಗ್ ನಡೆಸಿದ್ದರು. ಈ ವೇಳೆ ರಮ್ಯಾಗೆ ವೇದಿಕೆಗೆ ಪ್ರವೇಶಿಸಲು ಅವಕಾಶ ನಿರಾಕರಿಸಲಾಗಿದೆ. ಇದರಿಂದ ತೀವ್ರ ಬೇಸರಗೊಂಡ ಅವರು ವಾಪಸ್ ಹೋಗಿದ್ದಾರೆ.
ನಗರದ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ನಿನ್ನೆ ಸಂಜೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಸಂಜೆ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಏಕಾಏಕಿ ಕಾಣಿಸಿಕೊದ ರಮ್ಯ, ಬಳಿಕ ರಾಹುಲ್ ಕಾರ್ನರ್ ಮೀಟಿಂಗ್ ಸ್ಥಳಕ್ಕೂ ಆಗಮಿಸಿದ್ದರು. ಇನ್ನು ಅತಿಥಿಗಳ ಪಟ್ಟಿಯಲ್ಲಿ ರಮ್ಯ ಹೆಸರು ಇರದ ಕಾರಣ ಭದ್ರತಾ ಸಿಬ್ಬಂದಿ ಅವರಿಗೆ ಅವಕಾಶವನ್ನು ನೀಡಲಿಲ್ಲ.
ಇದರಿಂದ ಸಿಟ್ಟಾದ ರಮ್ಯ, ಎಂಟ್ರಿ ಕೊಡದ ಭದ್ರತಾ ಸಿಬ್ಬಂದಿ ಹಾಗೂ ರಾಯಚೂರಿನ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. ಎಷ್ಟೇ ಮನವಿ ಮಾಡಿಕೊಂಡರೂ ಭದ್ರತಾ ಸಿಬ್ಬಂದಿ ಅವಕಾಶ ನೀಡದಿದ್ದರಿಂದ ಆಕ್ರೋಶಗೊಂಡ ರಮ್ಯ, ಕೆಲಹೊತ್ತು ಅಲ್ಲೇ ವೇದಿಕೆ ಬಳಿ ವಾಗ್ವಾದ ನಡೆಸಿ ನಂತರ ಕೋಪಗೊಂಡು ಅಲ್ಲಿಂದ ವಾಪಸ್ ಹೋದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post