ಚಿಕ್ಕಬಳ್ಳಾಪುರ: ಪಟಾಕಿಯಿಂದ ಸಿಡಿದ ಬೆಂಕಿ ಕಿಡಿ ಪೆಟ್ರೋಲ್ ಕ್ಯಾನ್ ಮೇಲೆ ಬಿದ್ದು, ಇಡೀ ಅಂಗಡಿಯೇ ಹೊತ್ತು ಉರಿದ ಘಟನೆ ಬಾಗೇಪಲ್ಲಿ ತಾಲೂಕಿನ ಪಾಳ್ಯಕೆರೆ ಗ್ರಾಮದಲ್ಲಿ ನಡೆದಿದೆ.
ಪಟಾಕಿ ಹಚ್ಚುವ ಸಂದರ್ಭದಲ್ಲಿ ಬೆಂಕಿ ಕಿಡಿ ಪೆಟ್ರೋಲ್ ಕ್ಯಾನ್ ಮೇಲೆ ಬಿದ್ದಿದೆ. ಇದರ ಪರಿಣಾಮದಿಂದ ಅಂಗಡಿ ಮನೆ ಸಂಪೂರ್ಣವಾಗಿ ಹೊತ್ತು ಉರಿದಿದೆ. ಅಶ್ವತ್ಥಪ್ಪ ಎಂಬುವವರು ಅಂಗಡಿಯಲ್ಲಿ ಪೆಟ್ರೋಲ್ ಮತ್ತು ಡೀಸಲ್ ವ್ಯಾಪಾರ ಮಾಡುತ್ತಿದ್ದ ಮಾಡುತ್ತಿದ್ದರು.
ದೀಪಾವಳಿ ಹಬ್ಬದ ನಿಮಿತ್ತ ಅಶ್ವತ್ಥಪ್ಪ ಮನೆ ಮುಂಭಾಗದಲ್ಲಿ ಮಕ್ಕಳು ಪಟಾಕಿ ಸಿಡಿಸುವ ಸಮಯದಲ್ಲಿ ಅಂಗಡಿಯ ಮನೆಯಲ್ಲಿದ್ದ ಪೆಟ್ರೋಲ್, ಡೀಸೆಲ್ ಬ್ಯಾರೆಲ್ಗಳಿಗೆ ಬೆಂಕಿ ಕಿಡಿ ತಗುಲಿ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಕೂಡ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಿ ಹಾನಿ ಸಂಭವಿಸಿಲ್ಲ ಎಂದು ಮಾಹಿತಿ ಲಭ್ಯವಾಗಿದೆ.
ದೀಪಾವಳಿ ಹಬ್ಬದ ದಿನದಂದೇ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್
ವಿಜಯಪುರ: ದೀಪಾವಳಿ ಹಬ್ಬದ ದಿನದಂದೇ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿರೋ ಘಟನೆ ವಿಜಯಪುರ ಬಸ್ ನಿಲ್ದಾಣ ಬಳಿ ಇರುವ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ನಡೆದಿದೆ.
ಏಕಾಏಕಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇನ್ನು ಆಸ್ಪತ್ರೆಯಲ್ಲಿದ್ದ ಎಲ್ಲ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಅಗ್ನಿ ಅವಘಡದಿಂದ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post