ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ವೊಂದು ಹಳ್ಳಕ್ಕೆ ಉರುಳಿ ಬಿದ್ದಿರೋ ಘಟನೆ ಮಲೆ ಮಹದೇಶ್ವರ ಬೆಟ್ಟ ಸಮೀಪದ ತಾಳಬೆಟ್ಟದಲ್ಲಿ ನಡೆದಿದೆ.
ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಮಂಡ್ಯ ಜಿಲ್ಲೆ ಮದ್ದೂರು ಘಟಕದ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಈ ದುರ್ಘಟನೆಯಲ್ಲಿ 25 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇನ್ನು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೂಡಲೇ ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post