ವಿಜಯಪುರ: ಕಬ್ಬು ಸಾಗಿಸುತ್ತಿದ್ದ ಟ್ಯಾಕ್ಟರ್ಗೆ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಇಂಡಿ ತಾಲೂಕಿನ ಧೂಳಖೇಡ್ ಬಳಿಯ NH50 ರಲ್ಲಿ ನಡೆದಿದೆ.
ಭಯ್ಯಾಜಿ ಶಿಂಧೆ (50), ಸುಮಿತ್ರಾ ಶಿಂಧೆ (45) ಮೃತ ದುರ್ದೈವಿಗಳಾಗಿದ್ದಾರೆ. ಮೃತ ದಂಪತಿಯು ಅಥಣಿ ಮೂಲದವರಾಗಿದ್ದಾರೆ. ಮಹಾರಾಷ್ಟ್ರದ ಅಕ್ಕಲಕೋಟೆಯ ಸ್ವಾಮಿ ಸಮರ್ಥ ಕ್ಷೇತ್ರಕ್ಕೆಂದು ಕ್ರೂಸರ್ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ಕ್ರೂಸರ್ನಲ್ಲಿದ್ದ ಒಂಬತ್ತು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿರುವ ಆಸ್ಪತ್ಸೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಝಳಕಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದುರ್ಘಟನೆಯು ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post