ಬಳ್ಳಾರಿ: ಶೀಲ ಶಂಕಿಸಿ ಪತ್ನಿಯನ್ನ ಪತಿಯೇ ಬರ್ಬರವಾಗಿ ಹತ್ಯೆಗೈದು ಬಳಿಕ ಆತನೂ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಜಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೇಖಾ ಕೊಲೆಯಾದ ದುರ್ದೈವಿಯಾಗಿದ್ದಾಳೆ.
ಇನ್ನು, ಕುಡುಗೋಲಿನಿಂದ ಪತ್ನಿಯ ಹೊಟ್ಟೆ ಸೀಳಿ ಬರ್ಬರವಾಗಿ ಕೊಲೆ ಮಾಡಿ ಬಳಿಕ ಪತಿ ಕುಮಾರಸ್ವಾಮಿ ಕೂಡ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಸಂಡೂರು ತಾಲೂಕಿನ ಚೋರನೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ . ಈ ಘಟನೆ ಕುರಿತಂತೆ ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿ ಶೀಲ ಶಂಕಿಸಿ ಬರ್ಬರವಾಗಿ ಹತ್ಯೆಗೈದ ಪತಿ..
ಬಾಗಲಕೋಟೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ಮೇಲೆ ಪತಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿರೋ ಘಟನೆ ಬೂದಿಹಾಳ ಎಸ್ ಜಿ ಗ್ರಾಮದಲ್ಲಿ ನಡೆದಿದೆ. ಪಾರ್ವತಿ ಹೆರಕಲ್ (26) ಕೊಲೆಯಾದ ಪತ್ನಿ.
ಕೌಟುಂಬಿಕ ಕಲಹದಿಂದ ಬೇಸತ್ತು ಪತಿ ಮಲ್ಲಪ್ಪ ಹೆರಕಲ್ ಎಂಬುವವರು ಪತ್ನಿಯ ಮೇಲೆ ಕೊಡಲಿಯಿಂದ ತಲೆಗೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಈ ವೇಳೆ ಆಕೆ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತಂತೆ ಬೀಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post