ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಇಂದು ಸೂಪರ್ ಸ್ಟಾರ್ ರಜಿನಿಕಾಂತ್ ಹಾಗೂ ಜ್ಯೂನಿಯರ್ ಎನ್ಟಿಆರ್ ಭೇಟಿ ನೀಡಿದ್ದರು.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಬೊಮ್ಮಾಯಿ ನಿವಾಸಕ್ಕೆ ಗಣ್ಯರು ಭೇಟಿ ನೀಡಿದ್ದರು. ಇಬ್ಬರು ಗಣ್ಯರನ್ನ ಆತ್ಮೀಯವಾಗಿ ಬರಮಾಡಿಕೊಂಡ ಬೊಮ್ಮಾಯಿ ಕುಶಲೋಪರಿ ನಡೆಸಿದರು. ನಂತರ ಇಬ್ಬರು ಗಣ್ಯರನ್ನ ಸನ್ಮಾನಿಸಿ ಬೀಳ್ಕೊಟ್ಟರು. ಇದೇ ವೇಳೆ ರಜಿನಿಕಾಂತ್ ಪುತ್ರಿ ಐಶ್ವರ್ಯ ಕೂಡ ಇದ್ದರು.
ಇಂದು ಕನ್ನಡ ರಾಜ್ಯೋತ್ಸವ. ಈ ಸುದಿನದಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ರಜಿನಿಕಾಂತ್ ಹಾಗೂ ಜ್ಯೂನಿಯರ್ ಎನ್ಟಿಆರ್ ಬಂದಿದ್ದರು. ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಬಳಿಕ ನೇರವಾಗಿ ಇಬ್ಬರು ಗಣ್ಯರು ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿದ್ದರು.
ನಮ್ಮ ಪ್ರೀತಿಯ ಕರೆಗೆ ಓಗೊಟ್ಟು, ದಿ. ಪುನೀತ್ ರಾಜ್ ಕುಮಾರ್ ರವರಿಗೆ "ಕರ್ನಾಟಕ ರತ್ನ" ಪ್ರಶಸ್ತಿ ಪ್ರದಾನ ಮಾಡಲು ಕರ್ನಾಟಕ್ಕೆ ಆಗಮಿಸಿ, ಕನ್ನಡದಲ್ಲಿಯೇ ಮಾತನಾಡಿ ತಮ್ಮ ಕನ್ನಡ ಪ್ರೀತಿ ತೋರಿದ ಮಹಾನ ನಟರಾದ ಶ್ರೀ ರಜನಿಕಾಂತ್ ಹಾಗೂ ಶ್ರೀ ಜೂನಿಯರ್ ಎನ್.ಟಿ.ಆರ್. ರವರಿಗೆ ನನ್ನ ಹೃದಯಾಂತರಾಳದಿಂದ ಧನ್ಯವಾದಗಳು. @rajinikanth @tarak9999 pic.twitter.com/9g6ExOzFb4
— Basavaraj S Bommai (@BSBommai) November 1, 2022
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post