ಚಿತ್ರದುರ್ಗ: ಒಂದೇ ಕುಟುಂಬದ ತಾಯಿ ಹಾಗೂ ಇಬ್ಬರು ಮಕ್ಕಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಿಪ್ಪಕ್ಕ (75), ಮಾರಕ್ಕ (45) ದ್ಯಾಮಕ್ಕ (43) ಮೃತ ಮಹಿಳೆಯರು.
ಈ ಘಟನೆಯು ತಡರಾತ್ರಿ ನಡೆದಿದೆ ಎನ್ನಲಾಗಿದೆ. 1 ವರ್ಷದ ಹಿಂದೆ ತಿಪ್ಪಕ್ಕನ ಗಂಡ ಕೆಂಚಪ್ಪ (70) ಮೃತಪಟ್ಟಿದ್ದರು. ಬಳಿಕ ಮಗ ದ್ಯಾಮಣ್ಣ (47) ಅನಾರೋಗ್ಯದಿಂದ ಒಂದು ತಿಂಗಳ ಹಿಂದೆ ಮೃತಪಟ್ಟಿದ್ದ. ಪತಿ, ಮತ್ತು ಮಗನ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದರಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಗ್ರಾಮಸ್ಥರು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಸಬ್ ಇನ್ಸ್‌ಪೆಕ್ಟರ್ ಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post