ಶಿವಮೊಗ್ಗ: ಟಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಯುವತಿಯ ಹಾಲ್ ಟಿಕೆಟ್‌ನಲ್ಲಿ ಸನ್ನಿ ಲಿಯೋನ್ ಅಶ್ಲೀಲ ಫೋಟೋ ಇರುವುದು ಬೆಳಕಿಗೆ ಬಂದಿದೆ.
ಚಿಕ್ಕಮಗಳೂರಿನ ಕೊಪ್ಪದ ಪರೀಕ್ಷಾರ್ಥಿಯೊಬ್ಬರು ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ರುದ್ರಪ್ಪ ಕಾಲೇಜಿನಲ್ಲಿ ಟಿಇಟಿ ಪರೀಕ್ಷೆ ಬರೆಯಲು ಬಂದಿದ್ದರು. ಡಿಎಡ್, ಬಿಎಡ್ ಆದವರಿಗೆ ನಿಗದಿಪಡಿಸಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯಲು ಬಂದಿದ್ದ ವೇಳೆ ಯುವತಿಯ ಹಾಲ್ ಟಿಕೆಟ್‌ನಲ್ಲಿ ಸನ್ನಿ ಲಿಯೋನ್ ಅಶ್ಲೀಲ ಫೋಟೋ ಇರುವುದು ಕಂಡು ಬಂದಿದೆ.
ಇನ್ನು ಈ ರೀತಿ ಮೂಡಿ ಬಂದಿದ್ದಕ್ಕೆ ವಿದ್ಯಾರ್ಥಿನಿ ಪರೀಕ್ಷೆ ಬರೆಯುವ ಅರ್ಧ ಗಂಟೆಯ ಮುಂಚೆ ಕಾಲೇಜಿನ ಪ್ರಾಂಶುಪಾಲರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರಾಂಶುಪಾಲರು ಸಾರ್ವಜನಿಕ ಶಿಕ್ಷಣ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆದರೆ ಈ ಮಾಹಿತಿಯನ್ನ ಶಿಕ್ಷಣ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಇದನ್ನು ಆನ್ಲೈನ್ ದೋಷ ಎಂದು ಪರಿಗಣಿಸಿ ಅಭ್ಯರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪರೀಕ್ಷೆ ನಡೆದು ಎರಡು ದಿನದ ಬಳಿಕ ಕಾಲೇಜಿನ ಪ್ರಾಂಶುಪಾಲರು ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಸ್.ಪಿ. ಮಿಥುನ್ ಕುಮಾರ್, ಕೂಡಲೇ ಈ ಬಗ್ಗೆ ತನಿಖೆ ನಡೆಸಲು, ಪೊಲೀಸರಿಗೆ ಸೂಚಿಸಿದ್ದಾರೆ. ಇದು ಆನ್ಲೈನ್ ದೋಷವೆಂದು ಪರಿಗಣಿಸಿ ಅಭ್ಯರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post