ವಿಜಯಪುರ: ಕ್ರೂಸರ್ ಹಾಗೂ ಬೈಕ್ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ತಂದೆ ಹಾಗೂ ಮಗಳು ಸಾವನ್ನಪ್ಪಿರೋ ಘಟನೆ ದೇವರ ಹಿಪ್ಪರಗಿ ಪಟ್ಟಣದಲ್ಲಿ ನಡೆದಿದೆ. ರಮೇಶ್ ನಾಟಿಕಕಾರ (45) ಮಗಳು ಖುಷಿ (8 ) ಮೃತ ದುರ್ದೈವಿಗಳು.
ದಂಪತಿ ಹಾಗೂ ಓರ್ವ ಮಗಳು ಬೈಕ್ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ತಾಯಿ ಶ್ರೀದೇವಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಇಬ್ಬರು ಬಸವನ ಬಾಗೇವಾಡಿ ತಾಲೂಕಿನ ಬೂದಿಹಾಳ ಗ್ರಾಮದ ನಿವಾಸಿಗಳಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತಂತೆ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post