ಗದಗ: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ರಸ್ತೆಯ ಬಳಿ ನಡೆದಿದೆ
ಲಕ್ಷ್ಮೇಶ್ವರ ಪಟ್ಟಣದ ದೇಸಾಯಿ ಬಣದ ಅಕ್ಬರ್ ಅಲಿ ನಬಿಸಾಭ ಡಲಾಯತ್ (30), ಜಿಲ್ಲೆಯ ಮೌನೇಶ ಫಕ್ಕೀರೇಶ ಕುಂಬಾರ (21) ಗಾಯಗೊಂಡ ಬೈಕ್ ಸವಾರರು. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತಂತೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post