2023ರ ವಿಧಾನಸಭೆ ಚುನಾವಣೆಗೆ ಬಿಜೆಪಿ ರಣಕಹಳೆ ಬಾರಿಸಿದ್ದು ಜನಸಂಕಲ್ಪಯಾತ್ರೆ ಮೂಲಕ ಮತಕೋಟೆಗಳಿಗೆ ಲಗ್ಗೆ ಹಾಕ್ತಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜೆಪಿಯ ಸಂಕಲ್ಪಯಾತ್ರೆ ಸಾಗಿದೆ. ಎಂದಿನಂತೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅದ್ಧೂರಿ ವೇದಿಕೆ. ಬಿಜೆಪಿಯ ಘಟಾನುಘಟಿ ನಾಯಕರು. ಸಾವಿರಾರು ಬಿಜೆಪಿಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು. ಎಲ್ಲೆಲ್ಲೂ ಕೇಸರಿ ಕಹಳೆ. ಇದೆಲ್ಲಾ ಕಂಡು ಬಂದಿದ್ದು ಚಿಕ್ಕಮಗಳೂರು ಜಿಲ್ಲೆಯ ಕಡೂರು ಹಾಗೂ ತರೀಕೆರೆಯಲ್ಲಿ. ಬಿಜೆಪಿಯ ಜನಸಂಕಲ್ಪಯಾತ್ರೆ ಅದ್ಧೂರಿಯಾಗಿ ನಡೆದಿದೆ.
ಕಾಫಿನಾಡು ಚಿಕ್ಕಮಗಳೂರಲ್ಲಿ ಬಿಜೆಪಿ ಜನಸಂಕಲ್ಪಯಾತ್ರೆ!
ಕಡೂರು, ತರೀಕೆರೆಯಲ್ಲಿ ಬಿಜೆಪಿ ಅಭಿವೃದ್ಧಿಯ ಸಂಕಲ್ಪ!
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಬಿಜೆಪಿ ಜನಸಂಕಲ್ಪಯಾತ್ರೆ ಅದ್ಧೂರಿಯಾಗಿ ನೆರವೇರಿದೆ. ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಸಿ.ಟಿ.ರವಿ ಸೇರಿದಂತೆ ಬಿಜೆಪಿಯ ಹಲವು ನಾಯಕರು ಭಾಗಿಯಾಗಿದ್ದರು. ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಸಂಕಲ್ಪಯಾತ್ರೆಗೆ ಸಾಕ್ಷಿಯಾದ್ರು.
ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ!
ಕಡೂರಿನ ಸಂಕಲ್ಪ ವೇದಿಕೆಯಲ್ಲಿ ಸಿಎಂ ಬೊಮ್ಮಾಯಿಗೆ ಬೆಳ್ಳಿ ಗದೆ ನೀಡಿ ಶಾಸಕ ಬೆಳ್ಳಿ ಪ್ರಕಾಶ್ ಸನ್ಮಾನ ಮಾಡಿದ್ರು. ವೇದಿಕೆಯಲ್ಲಿ ಬೆಳ್ಳಿ ಪ್ರಕಾಶ್ರನ್ನು ಹಾಡಿಹೊಗಳಿದ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರ ನೀಡಿರುವ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿಕೊಟ್ರು. ಜನ ಸಂಕಲ್ಪ ಮಾಡಿದ್ರೆ ಯಾವುದೇ ಶಕ್ತಿ ಅದನ್ನು ತಡೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ಸಿಎಂ ಬೊಮ್ಮಾಯಿ ಟೀಕಾ ಪ್ರಹಾರ ನಡೆಸಿದ್ರು. ಬಳಿಕ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಬಿಜೆಪಿ ಸಂಕಲ್ಪಯಾತ್ರೆಗೆ ರಾಜ್ಯದೆಲ್ಲೆಡೆ ಜನಸಾಗರವೇ ಸೇರುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ140-150 ಸ್ಥಾನ ಗೆದ್ದು ಸರ್ಕಾರ ರಚಿಸೋದು ಗ್ಯಾರಂಟಿ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜೆಪಿಯ ಐವರನ್ನೂ ಗೆಲ್ಲಿಸಿಕೊಡುವಂತೆ ಮನವಿ ಮಾಡಿದ್ರು.
ಕಡೂರು ಬಳಿಕ ತರೀಕೆರೆ ಪಟ್ಟಣದಲ್ಲೂ ಬಿಜೆಪಿ ನಾಯಕರು ಜನಸಂಕಲ್ಪಯಾತ್ರೆ ನಡೆಸಿದ್ರು. ಇದಕ್ಕೂ ಮುನ್ನ ತರೀಕೆರೆ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಸಿಎಂ ಬೊಮ್ಮಾ ಶಂಕುಸ್ಥಾಪನೆ ನೆರವೇರಿಸಿದ್ರು. ಜಲಜೀವನ ಮಿಷನ್ ಯೋಜನೆಗೆ 625 ಕೋಟಿ ರೂ. ಹಾಗೂ 56 ಕೆರೆಗಳ ಅಭಿವೃದ್ಧಿಗೆ 406 ಕೋಟಿ ರೂ. ಸಿಸಿ ಚರಂಡಿ ಅಭಿವೃದ್ಧಿಗೆ 50 ಕೋಟಿ ಅನುದಾನ ನೀಡಿದ್ರು. ಕಡೂರು, ತರೀಕೆರೆ ಬಳಿಕ ಸಂಜೆ ಶಿವಮೊಗ್ಗದಲ್ಲೂ ಬಿಜೆಪಿ ಜನಸಂಕಲ್ಪಯಾತ್ರೆ ನಡೀತು. ಒಟ್ಟಿನಲ್ಲಿ ಜನಸಂಕಲ್ಪಯಾತ್ರೆ ಮೂಲಕ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪುವ ಕೆಲಸ ಮಾಡ್ತಿದ್ದಾರೆ. ಈ ಮೂಲಕ ಮತ್ತೆ ಅಧಿಕಾರ ಹಿಡಿಯುವ ವಿಶ್ವಾಸದಲ್ಲಿ ಬಿಜೆಪಿ ನಾಯಕರಿದ್ದಾರೆ.
Live : ಜನಸಂಕಲ್ಪ ಯಾತ್ರೆ – ಕಡೂರು, ಚಿಕ್ಕಮಗಳೂರು ಜಿಲ್ಲೆ #JanaSankalpaYatre https://t.co/u8Nh1dWHf7
— BJP Karnataka (@BJP4Karnataka) November 15, 2022
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post