ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ರಾಜ್ಯದ ಎರಡು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಮತ್ತು ಹಾಸನದಲ್ಲಿರೋ ಅವರ ಅಳಿಯನ ಮನೆ ಮೇಲೆ ಅಧಿಕಾರಿಗಳು ರೇಡ್ ಮಾಡಿದ್ದಾರೆ.
ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರೋ ಗಾಯತ್ರಿ ಶಾಂತೇಗೌಡ ನಿವಾಸಕ್ಕೆ ಐಟಿ ಅಧಿಕಾರಿಗಳು 10ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿದ್ದಾರೆ. ಯಾರಿಗೂ ಅನುಮಾನ ಬಾರದಿರಲಿ ಎಂದು ಕಾರುಗಳಿಗೆ ಅಭಿನವ್ ವೆಡ್ಸ್ ದೀಪಿಕಾ ಅಂತ ಮದುವೆ ಬೋರ್ಡ್ ಹಾಕಿಕೊಂಡು ಬಂದಿದ್ದಾರೆ. ಬಳಿಕ ಗಾಯತ್ರಿ ಶಾಂತೇಗೌಡ ನಿವಾಸದ ಮೇಲೆ ದಾಳಿ ಮಾಡಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಗಾಯತ್ರಿ ಶಾಂತೇಗೌಡ ಅಳಿಯನ ಮನೆ ಮೇಲೂ ದಾಳಿ
ಕಾಂಗ್ರೆಸ್ ಮುಖಂಡೆಯಾಗಿರುವ ಗಾಯತ್ರಿ ಶಾಂತೇಗೌಡ ಅವರ ಅಳಿಯನ ಮನೆ ಮೇಲೂ ಐಟಿ ರೇಡ್ ಮಾಡಿದೆ. ಹಾಸನದ ಬೇಲೂರು ತಾಲೂಕಿನಲ್ಲಿನ ಸಂತೋಷ್ ಮನೆಯಲ್ಲಿ ಐಟಿ ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸಿದ್ದಾರೆ. ಸಂತೋಷ್‌ಗೆ ಸೇರಿದ ಕಲ್ಯಾಣಮಂಟಪದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಸ್ತಿದ್ದಾರೆ.
ಮಾಜಿ ಎಂಎಲ್ಸಿ ಆಗಿರೋ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ ಹಿನ್ನೆಲೆಯಲ್ಲಿ, ಅವರ ನಿವಾಸ ಎದುರು ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಬಿಜೆಪಿ ಸರ್ಕಾರ ಹಾಗೂ ಮಾಜಿ ಸಚಿವ, ಸಿ.ಟಿ ರವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post