ಮೈಸೂರು: ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ಗೆ ಜೀವ ಬೆದರಿಕೆ ಬಂದಿದ್ದು, ಈ ಬಗ್ಗೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಹಾಸನದ ಸಕಲೇಶಪುರದ ನಿವಾಸಿ ರಘು ಎನ್ನುವವರಿಂದ ಶಾಸಕ ತನ್ವೀರ್ ಸೇಠ್ಗೆ ಜೀವ ಬೆದರಿಕೆ ಬಂದಿದೆ ಎಂಬ ಆರೋಪ ಕೇಳಿ ಬಂದಿದೆ. 100 ಅಡಿ ಎತ್ತರದ ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಿಸುವ ಬಗ್ಗೆ ತನ್ವೀರ್ ಸೇಠ್ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು. ಈ ಹೇಳಿಕೆಯನ್ನ ಉಲ್ಲೇಖಿಸಿ, ಸಾಮಾಜಿಕ ಜಾಲತಾಣದಲ್ಲಿ ತನ್ವೀರ್ ಸೇಠ್ಗೆ ಕೊಲೆ ಮಾಡುವ ಬೆದರಿಕೆ ಹಾಕಲಾಗಿದೆ. ಹೀಗಾಗಿ ಮೈಸೂರು ಬೀಡಿ ಮಜ್ದೂರ್ ಅಸೋಸಿಯೇಷನ್ ಕಾರ್ಯದರ್ಶಿ ಕೆ.ಕೆ.ಸಿ.ಶೌಕತ್ ಪಾಷ, ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈ ಹಿಂದೆ ಶಾಸಕ ತನ್ವೀರ್ ಸೇಠ್ ಹತ್ಯೆಗೆ ಯತ್ನಿಸಲಾಗಿತ್ತು. ಕುತ್ತಿಗೆ ಭಾಗಕ್ಕೆ ಚಾಕು ಹಿರಿದು ಕೊಲ್ಲಲು ಪ್ರಯತ್ನಿಸಿದ್ದರು. ಈ ವೇಳೆ ಶಾಸಕರು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿ, ಜೀವ ಉಳಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಶಾಸಕರಿಗೆ ಮತ್ತೊಂದು ಬೆದರಿಕೆ ಬಂದಿರೋದು ಆಘಾತ ತಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post