ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಹಲವು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಒತ್ತಾಯ ಬಂದಿದೆ. ನಾನು ಮೂರು ಕ್ಷೇತ್ರಗಳನ್ನು ಶಾರ್ಟ್ ಲಿಸ್ಟ್ ಮಾಡಿದ್ದೇನೆ. ಕೋಲಾರ, ಬಾದಾಮಿ ಹಾಗೂ ವರುಣ ಕ್ಷೇತ್ರ ಶಾರ್ಟ್ ಲಿಸ್ಟ್‌ನಲ್ಲಿದೆ. ಚುನಾವಣೆ ಘೋಷಣೆ ನಂತರ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಹೇಳುವೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದಿದ್ದಾರೆ.
ಸೋಲಿನ ಭಯದಲ್ಲಿ ಸರ್ವೆ ಮೊರೆ ಹೋಗಿದ್ದಾರೆ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ವೆ ಮಾಡಿಸಿದರೆ ತಪ್ಪೇನು? ನರೇಂದ್ರ ಮೋದಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿರಲಿಲ್ವಾ? ಅವರು ಸರ್ವೆ ಮಾಡಿಸಿರಲಿಲ್ವಾ? ಎಂದು ಪ್ರಶ್ನೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post