ಬಳ್ಳಾರಿ: ಮಂಗಳೂರು ನಗರದ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ನಿನ್ನೆ ನಡೆದ ಘಟನೆಯು ಅನಿರೀಕ್ಷಿತ ಅಲ್ಲ, ಇದದೊಂದು ಉಗ್ರ ಕೃತ್ಯ ಎಂದು ಖಚಿತವಾಗಿದೆ ಎಂದು ಕರ್ನಾಟಕ ಪೊಲೀಸರು ಸ್ಪಷ್ಟಡಿಸಿದ್ದಾರೆ.
ಘಟನೆ ಬಗ್ಗೆ ಬಳ್ಳಾರಿಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ.. ಸ್ಫೋಟ ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಇದೊಂದು ಉಗ್ರರ ಕೃತ್ಯ ಅಂತ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ನಕಲಿ ಐಡಿ ಕಾರ್ಡ್, ನಕಲಿ ವಿಳಾಸ ಬಳಸಿ ಈ ಕೃತ್ಯ ನಡೆಸಲಾಗಿದೆ. ನಕಲಿ ವಿಳಾಸ ಹುಬ್ಬಳ್ಳಿಯದ್ದು ಎಂದು ತಿಳಿದುಬಂದಿದೆ ಅಂತಾ ಬೊಮ್ಮಾಯಿ ಹೇಳಿದ್ದಾರೆ.
ಎನ್ಐಎ, ಐಬಿ ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟು ತನಿಖೆಯನ್ನ ಆರಂಭಿಸಿವೆ. ಆರೋಪಿಗಳು ಮಂಗಳೂರು-ಕೊಯಮತ್ತೂರುಗಳಲ್ಲಿ ಓಡಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇದೊಂದು ವ್ಯವಸ್ಥಿತ ಜಾಲ, ಆ ಜಾಲವನ್ನ ಪತ್ತೆ ಮಾಡ್ತೇವೆ ಎಂದು ಬಳ್ಳಾರಿಯಲ್ಲಿ ಬೊಮ್ಮಾಯಿ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post