ಮಂಗಳೂರು: ನಗರದ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆ ಅನಿರೀಕ್ಷಿತ ಅಲ್ಲ, ಇದದೊಂದು ಉಗ್ರ ಕೃತ್ಯ ಎಂದು ಖಚಿತವಾಗಿದೆ ಎಂದು ಕರ್ನಾಟಕ ಪೊಲೀಸರು ಸ್ಪಷ್ಟಡಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯಾದ್ಯಂತ ವಿಮಾನ ನಿಲ್ದಾಣಗಳು, ರೈಲ್ವೆ ನಿಲ್ದಾಣ, ಮಾರ್ಕೆಟ್, ಬಸ್ ನಿಲ್ದಾಣ ಗಳು ಸೇರಿ ಧಾರ್ಮಿಕ, ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ನಿಗಾವಹಿಸಲು ಹಿರಿಯ ಅಧಿಕಾರಿಗಳು ಎಲ್ಲಾ ಎಸ್ಪಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಮಂಗಳೂರು ಆಟೋ ಸ್ಫೋಟ ಅನಿರೀಕ್ಷಿತ ಅಲ್ಲ, ಉಗ್ರ ಕೃತ್ಯ -ಡಿಜಿಪಿ ಪ್ರವೀಣ್ ಸೂದ್
ಮಂಗಳೂರಿನಲ್ಲಿ ಬ್ಲಾಸ್ ಅಗಿದ್ದ Low Intensity IED Bomb ಎಂಬ ಶಂಕೆ ವ್ಯಕ್ತವಾಗಿದ್ದು, ಪ್ಲಾನ್ ಮಾಡಿದ್ದ ಸ್ಥಳಕ್ಕೆ ಸಾಗಿಸುವ ಮೊದಲೇ ಬ್ಲಾಸ್ಟ್ ಆಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈಗಾಗಲೇ ಬ್ಲಾಸ್ಟ್ ನಲ್ಲಿ ಭಾಗಿಯಾಗಿರೋ ಓರ್ವ ಮಂಗಳೂರು ಪೊಲೀಸರ ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆಯಲ್ಲಿ ಆತ ಕೂಡ ಗಾಯಗೊಂಡಿರೋ ಕಾರಣ ಆತನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆತನ ಬಳಿ ಹಿಂದೂ ಹೆಸರಿನಲ್ಲಿರೋ ಐಡಿ ಕಾರ್ಡ್ ಕೂಡ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಐಡಿ ಕಾರ್ಡ್ ನಕಲಿಯೇ ಎಂಬ ಬಗ್ಗೆಯೂ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಪ್ರಕರಣದ ಸಂಬಂಧ ಹಲವು ತಂಡಗಳನ್ನು ರಚನೆ ಮಾಡಿರೋ ಪೊಲೀಸರು ಮಂಗಳೂರು ಹಾಗೂ ಮಂಗಳೂರು ಹೊರ ವಲಯದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಇನ್ನಷ್ಟು ಜನರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಎನ್ಐಎ ತಂಡ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಇದನ್ನೂ ಓದಿ: ಮಂಗಳೂರು; ಆಟೋ ರಿಕ್ಷಾ ನಿಗೂಢ ಬ್ಲಾಸ್ಟ್- ಸ್ಥಳದಲ್ಲಿ ಸಂಶಯಾಸ್ಪದ ರೀತಿ ವಸ್ತುಗಳು ಪತ್ತೆ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post