ಚಿಕ್ಕಮಗಳೂರು: ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಸ್ನೇಹಿತರ ಮಧ್ಯೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.
ತರೀಕೆರೆ ಪಟ್ಟಣದ ಎಪಿಎಂಸಿ ಯಾರ್ಡ್ನಲ್ಲಿ ಈ ಘಟನೆ ನಡೆದಿದೆ. ಓಂಕಾರ (30) ಹತ್ಯೆಯಾದ ವ್ಯಕ್ತಿ. ರಾತ್ರಿ ಮನೆಯಲ್ಲಿದ್ದ ಓಂಕಾರನನ್ನ ಎಪಿಎಂಸಿ ಯಾರ್ಡ್ ಬಳಿ ಕರೆತಂದು ಸುನೀಲ್, ಸಂತೋಷ್, ಧನರಾಜ್ ಮತ್ತು ಇನ್ನಿಬ್ಬರು ಸೇರಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಓಂಕಾರನನ್ನ ಐವರು ಹತ್ಯೆ ಮಾಡಿದ್ದಾರೆ. ಸದ್ಯ ಪೊಲೀಸರು ಮೂವರನ್ನ ಬಂಧಿಸಿದ್ದು, ಇನ್ನಿಬ್ಬರಿಗಾಗಿ ಶೋಧ ನಡೆಸಿದ್ದಾರೆ. ಈ ಬಗ್ಗೆ ತರೀಕೆರೆ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post