ರಾಯಚೂರು: ಮಾಜಿ ರಾಜ್ಯಸಭಾ ಸದಸ್ಯ ಅಬ್ದುಲ್ ಸಮದ್ ಸಿದ್ದಿಖ್ (87) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಿಖ್ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ರಾಯಚೂರಿನ ಅಬ್ದುಲ್ ಸಮದ್ ಸಿದ್ದಿಖ್ 1988-1994ರವರೆಗೆ ರಾಜ್ಯಸಭಾ ಸದಸ್ಯರಾಗಿದ್ದರು. ಜಿಲ್ಲೆಯಲ್ಲಿ ಜನತಾದಳ ಪಕ್ಷ ಕಟ್ಟಲು ಮುಂದಾಳತ್ವ ವಹಿಸಿದ್ದರು. ವಯೋಸಹಜ ಅನಾರೋಗ್ಯದಿಂದ ಬಳಲ್ತಿದ್ದ ಸಿದ್ದಿಖ್ ಅವರನ್ನ ಹೈದ್ರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಾಯಚೂರು ನಗರದ ಶೇಖಮಿಯಾ ಬಾಬಾ ಖಬರಸ್ಥಾನದಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ. ಅವರ ಅಗಲಿಕೆಗೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post